Advertisement

ತಲಕಾವೇರಿಯಲ್ಲಿ ತೀರ್ಥೋದ್ಭವ; ಸಾವಿರಾರು ಭಕ್ತರಿಂದ ಪುಣ್ಯಸ್ನಾನ 

12:32 PM Oct 17, 2017 | Team Udayavani |

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಮಂಗಳವಾರ ಮಧ್ಯಾಹ್ನ 12.33ಕ್ಕೆ ಧನುರ್‌ ಲಗ್ನದಲ್ಲಿ  ತೀರ್ಥೋದ್ಭವವಾಗಿದ್ದು,ಅಪೂರ್ವ ಕ್ಷಣಕ್ಕಾಗಿ ಕಾತರರಾಗಿದ್ದ ಸಾವಿರಾರು ಭಕ್ತರು ಪುಣ್ಯ ಸ್ನಾನ ಮಾಡಿ, ತೀರ್ಥ ಸೇವಿಸಿ ಪುನೀತರಾದರು. 

Advertisement

ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ನೂರಾರು ಗಣ್ಯರು ಉಪಸ್ಥಿತರಿದ್ದು  ತೀರ್ಥೋದ್ಭವದ ವಿಸ್ಮಯವನ್ನು ಕಣ್‌ತುಂಬಿಸಿಕೊಂಡರು. ತೀರ್ಥ ಉದ್ಭವವಾಗುವ ಮುನ್ನ ಬ್ರಹ್ಮಕುಂಡಿಕೆಗೆ ಅರ್ಚಕರು ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಿದರು.

ಸಹಸ್ರಾರು ಭಕ್ತಾದಿಗಳ “ಜೈ ಜೈ ಮಾತಾ ಕಾವೇರಿ ಮಾತಾ’ ಉದ್ಘೋಷ ಮುಗಿಲು ಮುಟ್ಟಿತ್ತು.

ಸಂಪ್ರದಾಯದಂತೆ ತೀಥೋìದ್ಭವಕ್ಕೆ  ಒಂದು ಗಂಟೆ ಮುಂಚಿತ ವಾಗಿ ತಲಕಾವೇರಿಯ ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ, ಭಾಗಮಂಡಲದ ಘೇ ಭಗಂಡೇಶ್ವರ ಸನ್ನಿಧಿಯ ತಕ್ಕ ಮುಖ್ಯಸ್ಥ ಬಳ್ಳಡ್ಕ ಅಪ್ಪಾಜಿ ಮತ್ತು ದೇವಸ್ಥಾನದ ಪ್ರಮುಖರು ಮಂಗಳವಾದ್ಯಗಳೊಂದಿಗೆ ತಲಕಾವೇರಿಗೆ ಆಗಮಿಸಿದರು. 20 ಮಂದಿ ಅರ್ಚಕರು ವೇದ ಘೋಷದೊಂದಿಗೆ, ಮಹಾ ಸಂಕಲ್ಪ ಪೂಜೆ ನೆರವೇರಿಸಿ, ಮಹಾ ಮಂಗಳಾರತಿ ನೆರವೇರಿಸುತ್ತಿದ್ದಂತೆಯೇ ಕಾವೇರಿ ಆವಿರ್ಭವಿಸಿದೆ.

 ತೀಥೋì ದ್ಭವದ ಬಳಿಕ ಬೆಳ್ಳಿಯ ತಂಬಿಗೆಯಲ್ಲಿ ಕಾವೇರಿ  ತೀರ್ಥವನ್ನು ಕುಂಡಿಕೆಯಿಂದ ಪ್ರಥಮವಾಗಿ ಸಂಗ್ರಹಿಸಿ ಭಾಗಮಂಡಲದ ಘೇ ಭಗಂಡೇಶ್ವರನಿಗೆ ಅಭಿಷೇಕ ಮಾಡಲು ಕೊಂಡೊಯ್ದರು. ತೀಥೋìದ್ಭವದ ಬಳಿಕ ಭಕ್ತರಿಗೆ ತೀರ್ಥ ಸ್ವೀಕಾರಕ್ಕೆ ಅನುವು ಮಾಡಿಕೊಡಲಾಯಿತು.

Advertisement

ಕೊಡಗಿನಾದ್ಯಂತ ಹಬ್ಬವನ್ನು ವಿಶೇಷ ಶೃದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. 

 ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಊಟೋಪಚಾರ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದ್ದು,  ಮಡಿಕೇರಿ  ಭಾಗಮಂಡಲ ತಲಕಾವೇರಿಗೆ ಹೋಗಿ ಬರಲು ಅಗತ್ಯ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ.

 ತಲಕಾವೇರಿಯಲ್ಲಿ ತೀರ್ಥ ಪಡೆದುಕೊಳ್ಳುವಂತಾಗಲು ಏಕಮುಖವಾಗಿ ಭಕ್ತಾದಿಗಳು ಹೋಗಲು ಅಗತ್ಯ ಬ್ಯಾರಿಕೇಡ್‌ಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ಹಾಗೂ ಕುಡಿಯುವ ನೀರು ವ್ಯವಸ್ಥೆ ಮತ್ತಿತರ ಸುವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.

 ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ  ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗಿದೆ.

ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪಿಂಡ ಪ್ರಧಾನ ಕಾರ್ಯಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಸಿಸಿಟಿವಿಗಳನ್ನು  ಅಳವಡಿಸಲಾಗಿದೆ. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾವೇರಿ ಮಾತೆ ಕುರಿತು ಭಕ್ತಿ ಗೀತಾಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

 ಭಾಗಮಂಡಲ ಸುತ್ತಮುತ್ತ 10 ಕಿ.ಮೀ.ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next