Advertisement

ಸಮುದಾಯ ಸೋಂಕಿನ ಅಪಾಯ-ಕಾಲ್ನಡಿಗೆಗೆ ಶರಣಾದ ಸಾವಿರಾರು ಮಂದಿ ವಲಸೆ ಕಾರ್ಮಿಕರು

09:28 AM Mar 29, 2020 | Nagendra Trasi |

ನವದೆಹಲಿ:ಕೋವಿಡ್ 19 ಮಾರಣಾಂತಿಕ ಸೋಂಕು ಹರಡುವುದನ್ನು ತಡೆಗಟ್ಟಲು ಮಾರ್ಚ್ 24ರ ಮಧ್ಯರಾತ್ರಿಯಿಂದ ಏಪ್ರಿಲ್ 14ರವರೆಗೆ ಘೋಷಿಸಿರುವ 21 ದಿನಗಳ ಲಾಕ್ ಡೌನ್ ಪರಿಣಾಮ ಲಕ್ಷಾಂತರ ದಿನಗೂಲಿ ಕಾರ್ಮಿಕರು, ಬಡವರ ಜನಜೀವನದ ಮೇಲೆ ಪರಿಣಾಮ ಬೀರಿರುವುದಾಗಿ ವರದಿ ತಿಳಿಸಿದೆ.

Advertisement

ದಿನಗೂಲಿ ಕಾರ್ಮಿಕರ ಆರ್ಥಿಕ ಸ್ಥಿತಿ ಹದಗೆಡತೊಡಗಿದ್ದು, ವಲಸೆ ಕಾರ್ಮಿಕರು ತಮ್ಮ, ತಮ್ಮ ಊರುಗಳಿಗೆ ವಾಪಸ್ ಆಗುತ್ತಿದ್ದಾರೆ. ಕೆಲವು ಪ್ರದೇಶದಲ್ಲಿ ನೂರಾರು ಕಾರ್ಮಿಕರು ಕಾಲ್ನಡಿಗೆಯಲ್ಲಿ ತಮ್ಮ ಊರಿಗೆ ಮರಳುತ್ತಿದ್ದಾರೆ ಎಂದು ವರದಿ ವಿವರಿಸಿದೆ.

ಕಳೆದ ಎರಡು ಮೂರು ದಿನಗಳಿಂದ ಸಾವಿರಾರು ಬಡ ಹಾಗೂ ವಲಸೆ ಕಾರ್ಮಿಕರು ದೆಹಲಿ ಗಡಿಯನ್ನು ದಾಟಿ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ತಮ್ಮ ಕುಟುಂಬದ ಸದಸ್ಯರ ಜತೆ ನಡೆದುಕೊಂಡು ಉತ್ತರಪ್ರದೇಶ, ಬಿಹಾರದತ್ತ ತೆರಳುತ್ತಿದ್ದಾರೆ ಎಂದು ತಿಳಿಸಿದೆ.

ಮುಂಬೈ, ಹೈದರಾಬಾದ್ ನಂತಹ ದೊಡ್ಡ ನಗರಗಳಲ್ಲಿ ಕೂಲಿ ಮಾಡುತ್ತಿದ್ದ ವಲಸಿಗರು ಇದೀಗ ತಮ್ಮ ಹುಟ್ಟೂರಿಗೆ ತೆರಳುತ್ತಿದ್ದು, ಇದರಿಂದ ಸಮುದಾಯ ಸೋಂಕು ಹೆಚ್ಚಳವಾಗುವ ಅಪಾಯ ಅಧಿಕವಾಗಿದೆ. ಈ ಗುಂಪುಗಳಿಗೆ ಸಾಮಾಜಿಕ ಅಂತರದ ಬಗ್ಗೆ ಅರಿವು ಇದ್ದಂತಿಲ್ಲ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next