Advertisement

Maharashtra: ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ದೈಹಿಕ ದೌರ್ಜನ್ಯ, ಭುಗಿಲೆದ್ದ ಪ್ರತಿಭಟನೆ

03:00 PM Aug 20, 2024 | Team Udayavani |

ಮುಂಬೈ: ಸ್ಥಳೀಯ ಶಾಲೆಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ದೈಹಿಕ ದೌರ್ಜನ್ಯ ನಡೆಸಿದ ಘಟನೆ ವಿರುದ್ಧ ಮಹಾರಾಷ್ಟ್ರದ ಥಾಣೆಯ ಬದ್ಲಾಪುರ್‌ ನಲ್ಲಿ ಮಂಗಳವಾರ (ಆ.20) ಭಾರೀ ಪ್ರತಿಭಟನೆ ನಡೆಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.

Advertisement

ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಪ್ರತಿಭಟನಾಕಾರರು ನಗರವನ್ನು ಬಂದ್‌ ಮಾಡಿ, ಬದ್ಲಾಪುರ್‌ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ, ರೈಲ್ವೆ ಹಳಿ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.

ಮಕ್ಕಳ ಪೋಷಕರು ಹಾಗೂ ಸ್ಥಳೀಯರು ಘಟನೆಯನ್ನು ಖಂಡಿಸಿದ್ದು, ಆರೋಪಿ ವಿರುದ್ಧ ಕಠಿನ ಕ್ರಮ ತೆಗೆದುಕೊಂಡು, ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ನಡೆದ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಆರೋಪಿಗೆ ಕಠಿನ ಶಿಕ್ಷೆ ಸೇರಿದಂತೆ ಹಲವು ಬೇಡಿಕೆಗಳ ಪಟ್ಟಿಯನ್ನು ಶಾಲಾ ಆಡಳಿತ ಮಂಡಳಿಗೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.


ಘಟನೆಗೆ ಸಂಬಂಧಪಟ್ಟಂತೆ ಶಾಲೆಯ ಪ್ರಾಂಶುಪಾಲರು ಸೇರಿದಂತೆ ಇತರ ಮೂವರನ್ನು ಅಮಾನತುಗೊಳಿಸಲಾಗಿದೆ. ಘಟನೆಗೆ ನ್ಯಾಯ ಸಿಗುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ.

Advertisement

ಇದೊಂದು ಅತ್ಯಂತ ಕಳವಳಕಾರಿ ಘಟನೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪುಣೆ ಮತ್ತು ಮುಂಬೈನ ಐಎಎಸ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಸಿಸಿಟಿವಿ ಫೂಟೇಜ್‌ ಪರಿಶೀಲಿಸಿ, ತಕ್ಷಣವೇ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ಮಹಾರಾಷ್ಟ್ರ ಶಿಕ್ಷಣ ಸಚಿವ ದೀಪಕ್‌ ಕೇಸರ್ಕರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next