ಗುಡಿಬಂಡೆ: ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮಂಜುನಾಥರ ಮೇಲೆ ಜೆಡಿಎಸ್ ಕಾರ್ಯಕರ್ತ ನರೇಶ್ ರೆಡ್ಡಿ ಎಂಬವರಿಂದ ಮೊಬೈಲ್ ಕರೆ ಮೂಲಕ ಹಲ್ಲೆ ಬೆದರಿಕೆ ಹಾಕಿದ್ದು ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಘಟನೆ ನಡೆದಿದೆ.
ನವೆಂಬರ್ 25 ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಜೆಡಿಎಸ್ ನ ಪಂಚರತ್ನ ಯಾತ್ರೆ ಇದ್ದು, ಈ ಕಾರ್ಯಕ್ರಮಕ್ಕೆ ತಾಲೂಕಿನ ಪತ್ರಕರ್ತರನ್ನು ಆಹ್ವಾನಿಸದಿರುವ ಬಗ್ಗೆ ಪತ್ರಕರ್ತರ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಚರ್ಚೆ ನಡೆಯುತ್ತಿದ್ದ ವಿಷಯ ತಿಳಿದ ಬಾಗೇಪಲ್ಲಿ ಟೌನ್ ನಿವಾಸಿ ನರೇಶ್ ರೆಡ್ಡಿ ಎಂಬವರು ಏಕಾಏಕಿ ಮಂಜುನಾಥರಿಗೆ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.