Advertisement

ಪ್ರಾಣ ಬೆದರಿಕೆ : ಮುಖ್ಯಮಂತ್ರಿ ಏಕನಾಥ್ ಶಿಂಧೆ ಭದ್ರತೆ ಹೆಚ್ಚಳ

07:33 PM Oct 02, 2022 | Team Udayavani |

ಮುಂಬಯಿ : ಪ್ರಾಣ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರ ಭದ್ರತೆಯನ್ನು ಭಾನುವಾರ ಹೆಚ್ಚಿಸಲಾಗಿದೆ.

Advertisement

ಬೆದರಿಕೆ ಬಂದ ಕುರಿತು ಪ್ರತಿಕ್ರಿಯಿಸಿದ ಸಿಎಂ ಶಿಂಧೆ, ನಾನು ಅದರ ಬಗ್ಗೆ ಗಮನ ಹರಿಸುವುದಿಲ್ಲ. ನಮ್ಮ ಗೃಹ ಇಲಾಖೆ ಮತ್ತು ಗೃಹ ಸಚಿವ ದೇವೇಂದ್ರ ಫಡ್ನವಿಸ್ ಸಮರ್ಥರಾಗಿದ್ದಾರೆ. ನಾವು ಅವರನ್ನು ನಂಬುತ್ತೇವೆ. ಇಂತಹ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ಪುಲ್ವಾಮಾದಲ್ಲಿ ಉಗ್ರರ ಗುಂಡಿನ ದಾಳಿ : ಪೊಲೀಸ್ ಹುತಾತ್ಮ, ಯೋಧನಿಗೆ ಗಾಯ

ಸಾರ್ವಜನಿಕರ ಪರ ಕೆಲಸ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅವರ ಪರ ಕೆಲಸ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

“ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ದಸರಾ ರ‍್ಯಾಲಿ ನಡೆಸಲು ಶಿವಸೇನೆಯ ಠಾಕ್ರೆ ಬಣಕ್ಕೆ ಅನುಮತಿ ನೀಡಿದ ಬಾಂಬೆ ಹೈಕೋರ್ಟಿನ ತೀರ್ಪನ್ನು ನಾವು ಗೌರವಿಸುತ್ತೇವೆ ಮತ್ತು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಿಲ್ಲ” ಎಂದು ಶಿಂಧೆ ಹೇಳಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next