ನವದೆಹಲಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್‌ಎಫ್) ಭಾನುವಾರ ಇ-ಮೇಲ್ ಮೂಲಕ ಬೆದರಿಕೆಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಸಿಐಎಸ್‌ಎಫ್ ಕಚೇರಿಗೆ ಮಧ್ಯಾಹ್ನ 3.05ಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಏರ್ ಪೋರ್ಟ್ ಗಳಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ, ಅಲ್ಲದೆ ಎಲ್ಲೆಡೆ ಪೊಲೀಸರು ಅಲರ್ಟ್ ಆಗಿದ್ದಾರೆ ಆದರೆ ಎಲ್ಲೂ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.
ಲಕ್ನೋದ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಭೋಪಾಲ್, ಪಾಟ್ನಾ, ಜಮ್ಮು ಮತ್ತು ಜೈಪುರ ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಭೀತಿ ಹುಟ್ಟಿಸಿದೆ. ಆದರೆ ತನಿಖೆಯ ಬಳಿಕ ಪೊಲೀಸರು ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಹೇಳಿದ್ದಾರೆ.
ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಲಕ್ನೋ ಮತ್ತು ಇತರ ವಿಮಾನ ನಿಲ್ದಾಣಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಿರುವ ಕುರಿತು ಮಧ್ಯಾಹ್ನ 3.05 ಗಂಟೆಗೆ ಬೆದರಿಕೆ ಇ-ಮೇಲ್ ಬಂದಿತು. ಸಿಸಿಎಸ್‌ಎಐ ವಿಮಾನ ನಿಲ್ದಾಣದ ಭದ್ರತಾ ತಂಡ ಇಡೀ ವಿಮಾನ ನಿಲ್ದಾಣವನ್ನು ಸಂಪೂರ್ಣ ತಪಾಸಣೆ ನಡೆಸಿತು.ಆದರೆ ಈ ವೇಳೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿಸಿದೆ ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು ಕಾರ್ಯಾಚರಣೆಗಳೂ ಮುಂದುವರೆದಿದೆ.
ಇದನ್ನೂ ಓದಿ: Kannada Actor: ಕನ್ನಡದ ಯುವನಟ ಚೇತನ್ ಚಂದ್ರ ಮೇಲೆ 20 ಮಂದಿಯಿಂದ ಹಲ್ಲೆ