Advertisement

Threat Mail: ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

03:02 PM Oct 20, 2024 | Team Udayavani |

ಬೆಳಗಾವಿ: ದೇಶದಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ, ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್‌ ಕರೆ ಬರುತ್ತಿರುವ ಬೆಳವಣಿಗೆಗಳ ನಡುವೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.

Advertisement

ಅಪರಿಚತರು ವಿಮಾನ ನಿಲ್ದಾಣ ಸ್ಪೋಟಿಸುವ ಬೆದರಿಕೆ ಹಾಕಿದ್ದು, ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಬೆದರಿಕೆ ಪತ್ರ ರವಾನಿಸಲಾಗಿದೆ.

ತ್ಯಾಗರಾಜ್ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬಾಂಬ್ ಬೆದರಿಕೆ ಪತ್ರದ ಬೆನ್ನಲ್ಲೇ ವಿಮಾನ ನಿಲ್ದಾಣಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದ್ದು, ಶ್ವಾನ ದಳ, ಬಾಂಬ್ ಸ್ಕ್ವಾಡ್‌ ನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next