ಮೈಸೂರು/ಚಿಕ್ಕಮಗಳೂರು: ನನ್ನ ಪುತ್ರ ಯತೀಂದ್ರ ವಿರುದ್ಧ ಭಾರತೀಯ ಜನತಾ ಪಕ್ಷ ಮಾಡಿರುವ ಭೂಹಗರಣದ ಆರೋಪದಲ್ಲಿ ಯಾವುದೇ ಹುರುಳಿಲ್ಲ, ಅಲ್ಲದೇ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಬಿಜೆಪಿ ಮುಖಂಡರಾದ ಬಿಜೆ ಪುಟ್ಟಸ್ವಾಮಿ ಹಾಗೂ ಕೆಎಸ್ ಈಶ್ವರಪ್ಪ ಸಿಎಂ ಪುತ್ರ ಯತೀಂದ್ರಗೆ ಕಾನೂನು ಉಲ್ಲಂಘಿಸಿ ಜಮೀನು ಮಂಜೂರು ಮಾಡಿರುವುದಾಗಿ ಆರೋಪಿಸಿ ಹಳೇ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಈ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಸಿಎಂ ಈ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ನಾಯಕರ ಆರೋಪ ಸಂಪೂರ್ಣ ನಿರಾಧಾರ, ಚುನಾವಣೆ ಹತ್ತಿರ ಬಂದಿದೆ ಎಂದು ಸುಳ್ಳು ಆಪಾದನೆಗಳನ್ನು ಮಾಡಬಾರದು. ಈ ರೀತಿ ಸುಳ್ಳು ಆಪಾದನೆ ಮಾಡುವ ಬಿಜೆಪಿ ಮುಖಂಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಹೇಳಿದರು.
ಸರ್ಕಾರ ಬಾಯ್ಮುಚ್ಚಿಸುತ್ತಿದೆ: ಶೋಭಾ ಆರೋಪ
ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದರೆ ಅವರನ್ನು ಎದುರಿಸುವ ಹಾಗೂ ಬಾಯ್ಮುಚ್ಚಿಸುವ ಕೆಲಸ ಮಾಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.