Advertisement

ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ

03:08 PM Mar 27, 2023 | Team Udayavani |

ಹುಬ್ಬಳ್ಳಿ: ಧಮಕಿ ಹಾಕುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಹೊಡೆಯುವುದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಂಸ್ಕೃತಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿ ವಿಷಯವಾಗಿ ಶ್ರೀಗಳಿಗೆ ಧಮಕಿ ಹಾಕಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರ ಆರೋಪ ಬಾಲಿಶವಾಗಿದೆ. ಸಾಂಸ್ಕೃತಿಕ, ಭಾರತೀಯ ಹಿಂದೂ ಸಂಸ್ಕೃತಿ ಬಿಜೆಪಿ ಪಾಲಿಸಿಕೊಂಡು ಬಂದಿದೆ ಎಂದರು.

ಮೀಸಲಾತಿ ವಿಚಾರವಾಗಿ ಪಂಚಮಸಾಲಿ ಸಮುದಾಯದ ಹೋರಾಟ ಮುಂದುವರಿಸುವ ಯೋಚನೆ ಕಾಂಗ್ರೆಸ್ ಅವರದಾಗಿತ್ತು. ಆದರೆ ಬಿಜೆಪಿ ಸರ್ಕಾರ ಎಲ್ಲ ಮೀಸಲಾತಿ ಸಮಸ್ಯೆ ಪರಿಹರಿಸಿ ತಾರ್ಕಿಕ ಅಂತ್ಯ ಹಾಡಿದೆ. ಡಿ.ಕೆ.‌ ಶಿವಕುಮಾರ ಅವರದ್ದು ಗೂಂಡಾ ಸಂಸ್ಕೃತಿಯಾಗಿರುವುದು ಜಗತ್ತಿಗೆ ಗೊತ್ತಿದೆ ಎಂದು ಕುಟುಕಿದರು.

ಕಾಂಗ್ರೆಸ್ ನವರು ಮಾಡುತ್ತಿರುವ ಆರೋಪ‌ ಶ್ರೀಗಳಿಗೆ ಮಾಡುತ್ತಿರುವ ಅಪಮಾನವಾಗಿದೆ. ಒಕ್ಕಲಿಗ ಸಮಾಜಕ್ಕೆ‌ ಮೀಸಲಾತಿ ನೀಡಿರುವುದು ಡಿ.ಕೆ. ಶಿವಕುಮಾರ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಗೆ ಸಹಮತವಿಲ್ಲ ಎಂಬುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಪಂಚಮಸಾಲಿ ಹೋರಾಟದಲ್ಲಿ ಭಾಗವಹಿಸುತ್ತಿದ್ದರು. ಅವರು ಬಿಜೆಪಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು‌ ಮಾತ್ರ ಮಾಡುತ್ತಿದ್ದರು. ಇದರ ಅರ್ಥ ಅವರ ಬದ್ಧತೆ ಇರಲಿಲ್ಲ. ಸದಾಶಿವ ಆಯೋಗ ಒಪ್ಪುವಂತಹ, ಸಮಸ್ಯೆ ಬಗೆಹರಿಸುವ ತಾಕತ್ತು ಇರಲಿಲ್ಲ. ತಮ್ಮ ಕಾಲದಲ್ಲಿ ಅವೈಜ್ಞಾನಿಕವಾಗಿ ಮೀಸಲಾತಿ ನೀಡಿದ್ದರು. ಧರ್ಮದ ಆಧಾರ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂಬ ಸ್ಪಷ್ಟ ನಿರ್ಣಯವಾಗಿದೆ. ಬಿಜೆಪಿಯದು ನಿರ್ಣಾಯಕ ಸರ್ಕಾರವಾಗಿದೆ. ನಮ್ಮ ಪಕ್ಷದ ಬದ್ಧತೆ ಸ್ಪಷ್ಟವಾಗಿದೆ ಎಂದರು.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಮೀಸಲಾತಿ ಸ್ಥಗಿತ ಮಾಡುತ್ತೇನೆ ಎಂದು ಹೇಳುತ್ತಿದ್ದು, ಅದರ ಅರ್ಥ ಅವರು ಅಧಿಕಾರಕ್ಕೆ ಬರವುದಿಲ್ಲ ಎಂದು ಗ್ಯಾರಂಟಿಯಾಗಿ ಗೊತ್ತಿದೆ. ಸಿದ್ದರಾಮಯ್ಯ ಅವರಿಗೆ ಇಲ್ಲಿಯವರೆಗೆ ಒಂದು ನಿರ್ದಿಷ್ಟ ಕ್ಷೇತ್ರ ಆಯ್ಕೆ ಮಾಡಲು ಆಗಿಲ್ಲ. ಕಳೆದ ಬಾರಿ ಬಾದಾಮಿಯಲ್ಲಿಹೆಚ್ಚಿನ 1500 ಮತಗಳು ಬೀಳದಿದ್ದರೆ ಅವರು ಮಾಜಿ ಮುಖ್ಯಮಂತ್ರಿ ಅಲ್ಲ ಮಾಜಿ ಶಾಸಕರಾಗಿರುತ್ತಿದ್ದರು. 11 ಬಜೆಟ್ ಮಂಡಿಸಿದವರಿಗೆ ಒಂದು ಕ್ಷೇತ್ರ ಸಿಗುತ್ತಿವಲ್ಲ. ಗೆಲ್ಲುವ ವಿಶ್ವಾಸ ಅವರಿಗೆ ಇಲ್ಲ ಎಂದರು.

Advertisement

ಸಿದ್ದರಾಮಯ್ಯನವರು ಪರಮೇಶ್ವರ, ಮುನಿಯಪ್ಪ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸತತವಾಗಿ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ಹಳೆ ಪರಂಪರೆ ಇದ್ದು, ದಲಿತ ಹೆಸರು ಹೇಳಿ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next