Advertisement

ಹಿಜಾಬ್‌ ತೀರ್ಪು ನೀಡಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ

12:17 PM Mar 23, 2022 | Team Udayavani |

ಬೆಂಗಳೂರು: ಹಿಜಾಬ್‌ ಕುರಿತು ತೀರ್ಪು ನೀಡಿದ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ತಮಿಳುನಾಡು ಪೊಲೀಸರಿಂದ ಬಂಧನಕ್ಕೊಳಗಾದ ತೌಹಿದ್‌ ಜಮಾದ್‌ ಮುಸ್ಲಿಂ ಸಂಘಟನೆ ಮುಖಂಡನನ್ನು ವಿಧಾನಸೌಧ ಠಾಣೆ ಪೊಲೀಸರು 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ತಮಿಳುನಾಡಿನ ತಿರುಪತ್ತೂರು ಜೈಲಿನಿಂದ ಬಾಡಿ ವಾರೆಂಟ್‌ ಪಡೆದು ರೆಹಮತ್‌ ಉಲ್ಲಾನನ್ನು ಮಂಗಳವಾರ ನಗರಕ್ಕೆ ತಂದ ಪೊಲೀಸರು, 37ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿ 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಶಾಲಾ-ಕಾಲೇಜು ತರಗತಿಯಲ್ಲಿ ಹಿಜಾಬ್‌ ಧರಿಸುವಂತಿಲ್ಲ ಎಂದು ಹೈಕೋರ್ಟ್‌ ತ್ರಿಸದಸ್ಯ ಪೀಠ ಆದೇಶಿಸಿತ್ತು. ಅದರ ಬೆನ್ನಲ್ಲೇ ತಮಿಳುನಾಡಿನ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ತೌಹೀದ್‌ ಜಮಾದ್‌ ಮುಸ್ಲಿಂ ಸಂಘಟನೆ ಮುಖಂಡ ರೆಹಮತ್‌ ಉಲ್ಲಾ ಕರ್ನಾಟಕ ಹೈಕೋರ್ಟ್‌ನ ಹಿಜಾಬ್‌ ಕುರಿತು ತೀರ್ಪು ಉಲ್ಲೇಖೀಸಿ, ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಪರೋಕ್ಷವಾಗಿ ಬೇದರಿಕೆ ಹಾಕಿದ್ದ.

ಈ ಹೇಳಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ವಿಡಿಯೊ ಆಧರಿಸಿ ವಕೀಲ ಸುಧಾ ಕಟ್ವ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಎಫ್ ಐಆರ್‌ ದಾಖಲಾಗಿತ್ತು. ನ್ಯಾಯಮೂರ್ತಿಗಳಿಗೆ ಬೆದರಿಕೆ ಸಂಬಂಧ ತಮಿಳುನಾಡು ಪೊಲೀಸರು ರೆಹಮತ್‌ ಉಲ್ಲಾನನ್ನು ಬಂಧಿಸಿ ತಿರುಪತ್ತೂರು ಜೈಲಿಗೆ ಕಳುಹಿಸಿದ್ದರು. ಹೀಗಾಗಿ ವಿಧಾನಸೌಧ ಠಾಣೆ ಪೊಲೀಸರು, ಬಾಡಿ ವಾರೆಂಟ್‌ ಪಡೆದು ಆರೋಪಿಯನ್ನು ನಗರಕ್ಕೆ ಕರೆತಂದಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next