Advertisement

ಮುಸ್ಲಿಮರ ಪರ ವಕೀಲರಿಗೆ ಬೆದರಿಕೆ: ಇಬ್ಬರಿಗೆ ನೋಟಿಸ್‌ ಜಾರಿ

12:52 AM Sep 04, 2019 | Team Udayavani |

ಹೊಸದಿಲ್ಲಿ: ಅಯೋಧ್ಯೆಯ ವಿವಾದಿತ ಜಮೀನಿನ ಮಾಲೀಕತ್ವದ ಬಗೆಗಿನ ವಿಚಾರಣೆ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸುನ್ನಿ ವಕ್ಫ್ ಬೋರ್ಡ್‌ ಮತ್ತು ಇತರ ಮುಸ್ಲಿಂ ಸಂಘಟನೆಗಳ ಪರವಾಗಿ ವಾದಿಸುತ್ತಿರುವ ಹಿರಿಯ ನ್ಯಾಯವಾದಿ ರಾಜೀವ್‌ ಧವನ್‌, ತಮಗೆ ಮುಸ್ಲಿಂ ಸಂಘಟನೆಗಳ ಪರವಾಗಿ ವಾದಿಸಬಾರದು ಎಂದು ಬೆದರಿಕೆ ಬಂದಿದೆ ಎಂದು ಸುಪ್ರೀಂಕೋರ್ಟ್‌ಗೆ ಅರಿಕೆ ಮಾಡಿಕೊಂಡಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ಸಾಂವಿಧಾನಿಕ ಪೀಠ ಇಬ್ಬರಿಗೆ ನೋಟಿಸ್‌ ಜಾರಿ ಮಾಡಿದೆ. ಜತೆಗೆ ಎರಡು ವಾರಗಳ ಬಳಿಕ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.

Advertisement

ಶಿಕ್ಷಣ ಇಲಾಖೆಯ ನಿವೃತ್ತ ಇಲಾಖೆ ಅಧಿಕಾರಿ ಶಣ್ಮುಗಮ್‌, ರಾಜಸ್ಥಾನ ನಿವಾಸಿ ಸಂಜಯ ಕಲಾಲ್‌ ಭಜರಂಗಿ ಎಂಬುವರು ಈ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಆ.14ರಂದು ತಮಗೆ ಪತ್ರ ಮುಖೇನ ಬೆದರಿಕೆ ಹಾಕಲಾಗಿದೆ ಎಂದು ಧವನ್‌ ಹೇಳಿದ್ದಾರೆ. ಇದೇ ವೇಳೆ ಅಯೋಧ್ಯೆಯ ಬೌದ್ಧರಿಗೆ ಸೇರಿದ ಸ್ಥಳ ಎಂಬ ವಿಚಾರವೂ ಸುಪ್ರೀಂಕೋರ್ಟ್‌ನಲ್ಲಿ ಪ್ರಸ್ತಾವವಾಗಿದೆ.

ಅರ್ಜಿದಾರನ ಮೇಲೆ ಹಲ್ಲೆ: ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿದಾರರಾಗಿರುವ ಇಕ್ಬಾಲ್‌ ಅನ್ಸಾರಿ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ಕೋರ್ಟ್‌ನಲ್ಲಿ ಹೂಡಿರುವ ಮೊಕದ್ದಮೆ ಹಿಂಪಡೆಯದೇ ಇದ್ದರೆ, ಅವರನ್ನು ಕೊಲ್ಲುವ ಬೆದರಿಕೆಯನ್ನು ಇಬ್ಬರು ಒಡ್ಡಿ, ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next