ಶ್ರೀನಗರ್: ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಮೂರು ಎ.ಕೆ.47 ಶಸ್ತ್ರಾಸ್ತ್ರ, ನಾಲ್ಕು ಪಿಸ್ತೂಲ್ ಹಾಗೂ ಇತರ ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡಲು ಉಗ್ರರು ನಡೆಸಿದ ಪ್ರಯತ್ನ ವಿಫಲಗೊಳಿಸಲಾಗಿದೆ ಎಂದು ಪೊಲೀಸರು ಶನಿವಾರ (ಮೇ 29) ತಿಳಿಸಿದ್ದಾರೆ.
ಇದನ್ನೂ ಓದಿ:ಶಾಸಕರಿಂದ 10 ಲಕ್ಷ ರೂ. ಮೊತ್ತದ 700ಕ್ಕೂ ಅಧಿಕ ಪಲ್ಸ್ ಆಕ್ಸಿ ಮೀಟರ್ ಹಸ್ತಾಂತರ
ತಾಂಗ್ಧಾರ್ ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಮೂರು ಎಕೆ 47 ರೈಫಲ್ಸ್, ನಾಲ್ಕು ಪಿಸ್ತೂಲ್ ಗಳನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಉಗ್ರರ ಪ್ರಯತ್ನ ವಿಫಲಗೊಳಿಸಲಾಗಿದೆ ಎಂದು ಭದ್ರತಾ ಪಡೆ ಹೇಳಿದೆ. ಗಡಿ ನಿಯಂತ್ರಣ ರೇಖೆ ಸೇರಿದಂತೆ ಜಾಬ್ಡಿ ತಾಂಗ್ಧಾರ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಶಸ್ತ್ರಾಸ್ತ್ರ ಕಳ್ಳಸಾಗಣೆ ಪ್ರಯತ್ನ ವಿಫಲಗೊಳಿಸಿದ ನಂತರ ಉಗ್ರರಿಗಾಗಿ ಈ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಭದ್ರತಾ ಪಡೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.