Advertisement

ವೇಶ್ಯಾವಾಟಿಕೆಗೆ ದೂಡುತ್ತಿದ್ದ ಮೂವರ ಬಂಧನ

11:57 AM Jan 24, 2018 | Team Udayavani |

ಬೆಂಗಳೂರು: ಕೆಲಸ ಕೊಡಿಸುವುದಾಗಿ ಹೇಳಿ ನೆರೆ ರಾಜ್ಯಗಳಿಂದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಶಾಹಿದ್‌ ಶೇಖ್‌ (29), ಭರತ್‌ (32), ಸಲೀಂ ಶೇಖ್‌ (25) ಬಂಧಿತರು. ಇವರಿಂದ 3 ಮೊಬೈಲ್‌, 5 ಎಟಿಎಂ ಕಾರ್ಡ್‌ಗಳು ಹಾಗೂ 2 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ನಗರದ ಹೊರವಲಯದ ಚಿಕ್ಕಬಾಣಾವರ ಬಳಿಯ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ ಬಾಡಿಗೆಗೆಂದು ಪ್ಲಾಟ್‌ಗಳನ್ನು ಪಡೆದಿದ್ದ ಆರೋಪಿಗಳು, ಅಲ್ಲಿಯೇ ಹೆಣ್ಣು ಮಕ್ಕಳನ್ನು ಇರಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು. ಇಂಟರ್‌ನೆಟ್‌ ಮತ್ತು ಮೊಬೈಲ್‌ಗ‌ಳ ಮೂಲಕ ಟೆಕ್ಕಿಗಳು ಮತ್ತು ಶ್ರೀಮಂತ ವಿದ್ಯಾರ್ಥಿಗಳನ್ನು ಬುಕ್‌ ಮಾಡಿ ಸ್ನೇಹಿತರು ಮತ್ತು ಸಂಬಂಧಿಗಳ ಸೋಗಿನಲ್ಲಿ ಪ್ಲಾಟ್‌ಗೆ ಕರೆಸಿಕೊಳ್ಳುತ್ತಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಟೆಕ್ಕಿಗಳ ಸೋಗಿನಲ್ಲಿ ಆರೋಪಿಗಳನ್ನು ಸಂಪರ್ಕಿಸಿದ್ದಾರೆ. ಈ ವಿಶೇಷ ಕಾರ್ಯಾಚರಣೆ ವೇಳೆ ಮೂವರನ್ನು ಬಂಧಿಸಿದ್ದಾರೆ. ನಾಲ್ವರು ಹೊರ ರಾಜ್ಯದ ಯುವತಿಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next