Advertisement

ಮೂರು ಮಸೂದೆ ಮಂಡನೆ

10:40 PM Dec 16, 2021 | Team Udayavani |

ಬೆಳಗಾವಿ: ಪದವಿ ಪೂರ್ವ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ವರ್ಗಾವಣೆಗೆ ಅವಕಾಶ ಕಲ್ಪಿಸಲು ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) 2020 ಮಸೂದೆಯನ್ನು ಮಂಡನೆ ಮಾಡಲಾಯಿತು.

Advertisement

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿಧಾನಸಭೆಯಲ್ಲಿ  ಮಸೂದೆ  ಮಂಡನೆ ಮಾಡಿದರು. ಪ.ಪೂ. ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವರ್ಗಾವಣೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತಗೊಳಿಸುವುದು. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಉಪನ್ಯಾಸಕರನ್ನು ನಿಯೋಜನೆ ಮಾಡಲು ಹುದ್ದೆಗಳ ಸಮರ್ಪಕ ಹಂಚಿಕೆ ಹಾಗೂ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಅನುಪಾತವನ್ನು ಸರಿಪಡಿಸಲು ತಿದ್ದುಪಡಿ ಮಾಡಲು ಸರಕಾರ ನಿರ್ಧರಿಸಿದೆ.

ಕರ್ನಾಟಕ ರಾಜ್ಯ ಆಯುಷ್‌ ವಿಶ್ವ ವಿದ್ಯಾನಿಲಯ ಮಸೂದೆ 2021 ಅನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಮಂಡಿಸಿದರು. ಶಿವಮೊಗ್ಗದಲ್ಲಿ ಆಯುಷ್‌ ವಿಶ್ವ ವಿದ್ಯಾನಿಲಯ ಸ್ಥಾಪನೆಗೆ ಸರಕಾರ ತೀರ್ಮಾನಿಸಿದ್ದು 20 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಿದೆ.

ಬೆಂಗಳೂರಿನ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜ್‌ ಅನ್ನು (ಯುವಿಸಿಇ) ಐಐಟಿ ಮಾದರಿಯಲ್ಲಿ  ಉನ್ನತ ಮಟ್ಟದ ವಿಶ್ವವಿದ್ಯಾನಿಲಯ ಮಾಡುವ ಮಸೂದೆಯನ್ನು ಮಂಡಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next