Advertisement

ನಗರದೆಲ್ಲೆಡೆ ಮೂರು ದಿನ ನಿಷೇಧಾಜ್ಞೆ ಜಾರಿ

12:33 AM Dec 19, 2019 | Lakshmi GovindaRaj |

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ಹಾಗೂ ನಾಗರಿಕ ರಾಷ್ಟ್ರೀಯ ನೋಂದಣಿ ವಿರೋಧಿಸಿ ನಡೆಸುವ ಪ್ರತಿಭಟನೆಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವ ಸಾಧ್ಯತೆಯಿರುವ ಹಿನ್ನೆಲೆಯ ಕಾರಣ ನೀಡಿ ಬೆಂಗಳೂರು ನಗರಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಆದೇಶ ಹೊರಡಿಸಿದ್ದಾರೆ.

Advertisement

ಇಂದು ಬೆಳಿಗ್ಗೆ 6ಗಂಟೆಯಿಂದ ಡಿ.21ರ ಮಧ್ಯರಾತ್ರಿ 12ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು, ಉಲ್ಲಂ ಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ. ಪೌರತ್ವ ಕಾಯಿದೆ ವಿರೋಧಿಸಿ ರಾಜಕೀಯ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಇನ್ನಿತರೆ ಸಂಘಟನೆಗಳು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದು,

ಪೂರ್ವಾನುಮತಿಯನ್ನು ಪಡೆಯದೆ ಏಕಾಏಕಿಯಾಗಿ ಬೆಂಗಳೂರು ನಗರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿರುತ್ತಾರೆ. ಜತೆಗೆ, ಡಿ.19 ಹಾಗೂ 20ರಂದು ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಅಖೀಲ ಭಾರತ ಬಂದ್‌ಗೆ ಕರೆಕೊಟ್ಟಿರುವ ಮಾಹಿತಿ ಕೂಡ ಇದೆ.

ಹೀಗಾಗಿ, ಇಂತಹ ಸಂಧರ್ಭಗಳಲ್ಲಿ ಪ್ರತಿಭಟನೆಗಳು, ಮೆರವಣಿಗಳು ನಡೆದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಹಾಗೂ ಪ್ರತಿಭಟನೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ ಸಾರ್ವಜನಿಕರ ಸಂವಿಧಾನಿಕ ಹಕ್ಕುಗಳು ಚಲಾವಣೆಗೂ ಅನಾನುಕೂಲವಾಗಲಿದೆ ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ಆಯುಕ್ತರು ತಿಳಿಸಿದ್ದಾರೆ.

ಉತ್ತರ ಭಾರತಕ್ಕೆ ಹೋಗಿ!: ಸುದ್ದಿಗಾರರ ಜತೆ ಮಾತಾನಾಡಿರುವ ಆಯುಕ್ತ ಭಾಸ್ಕರ್‌ ರಾವ್‌ ಪೌರತ್ವ ಕಾಯಿದೆ ವಿಚಾರವಾಗಿ ಪ್ರತಿಭಟನೆ ನೆಪದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Advertisement

ಉತ್ತರ ಭಾರತದಲ್ಲಿ ನಡೆಯು ತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸುವಂತಿದ್ದರೆ ಅಲ್ಲಿಗೇ ಹೋಗಿ ಪ್ರತಿಭಟಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಪ್ರಚೋದನಾಕಾರಿಯಾಗಿ ಹೇಳಿಕೆ ಪೋಸ್ಟ್‌ ಮಾಡುವ ಬಗ್ಗೆ ಸೈಬರ್‌ ಪೊಲೀಸರು ತೀವ್ರ ನಿಗಾ ಇಟ್ಟಿ¨ªಾರೆ. ಸಾಮಾಜಿಕ ತಾಣಗಳ ಮೂಲಕ ಶಾಂತಿ ಕದಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗು ವುದು ಎಂದು ಆಯುಕ್ತರು ಹೇಳಿದ್ದಾರೆ.

ಸೂಕ್ತ ಭದ್ರತೆ ಕೈಗೊಳ್ಳಲು ಸೂಚನೆ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ಹಾಗೂ ನಾಗರಿಕ ರಾಷ್ಟ್ರೀಯ ನೋಂದಣಿ ವಿಚಾರವಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕದಡದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.ರಾಜು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ, ಗುಪ್ತಚರ ದಳ ಎಡಿಜಿಪಿ, ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆ ಸಭೆ ಸುಧೀರ್ಘ‌ ಸಭೆ ನಡೆಸಿದ ಡಿಜಿಪಿ ಅವರು, ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದರು ಎಂದು ಮೂಲಗಳು ತಿಳಿಸಿವೆ. ಡಿಜಿಪಿ ಸೂಚನೆ ಮೇರೆಗೆ ಆಯಾ ವಲಯ ಆಯುಕ್ತರು,ಐಜಿಪಿಗಳು, ಹಾಗೂ ಜಿಲ್ಲಾ ಎಸ್ಪಿಗಳು ಜಿಲ್ಲೆಗಳಲ್ಲಿ ಸೂಕ್ಷ್ಮತೆ ಪರಿಸ್ಥಿತಿ ಅವಲೋಕಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next