ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿ ಶಾಲೆಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ರಜೆ ನೀಡಲು ನಿರ್ಧಾರ ಮಾಡಲಾಗಿದೆ.
ಸಭೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಶಾಲಾ ಮಕ್ಕಳು ಹಾಗೂ ಶಿಕ್ಷಕರಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದೆ. ಸೋಂಕು ಇನ್ನಷ್ಟು ಹೆಚ್ಚಬಾರದು ಎಂಬ ದೃಷ್ಟಿಯಿಂದ 1ರಿಂದ 9 ನೇ ತರಗತಿ ಮಕ್ಕಳಿಗೆ ರಜೆ ನೀಡಲಾಗುತ್ತಿದೆ. ನಾಳೆಯಿಂದ ಸೋಮವಾರದವರೆಗೆ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ನೀಡಲಾಗಿದೆ. ಈವರೆಗೆ 45 ಶಾಲೆಯ 208 ಮಕ್ಕಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಎಂದರು.
ಇದನ್ನೂ ಓದಿ:ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ತೀರ್ಮಾನ: ಏನಿದು ಡಿಕೆಶಿ ಪ್ಲ್ಯಾನ್
ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಈಗಾಗಲೇ ಕೋವಿಡ್ ನಿಯಂತ್ರಣಕ್ಕೆ ಟಾಸ್ಕ್ ಪೋರ್ಸ್ ರಚಿಸಲಾಗಿದೆ. ಭಾನುವಾರ ಮತ್ತೆ ಸಭೆ ಸೇರಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವ ಈಶ್ವರಪ್ಪ ಹೇಳಿದರು.