Advertisement
ಪ್ರಮುಖವಾಗಿ ರಾಜ್ಯ ಸರ್ಕಾರದ ಖರ್ಚು ವೆಚ್ಚದ ಲೆಕ್ಕದ ಹಣಕಾಸು ವಿಧೇಯಕವನ್ನು ಎರಡು ಗಂಟೆಯಲ್ಲಿ ಎರಡೂ ಮನೆಯಲ್ಲಿ ಚರ್ಚಿಸಿ, ಅಂಗೀಕಾರ ಪಡೆಯಲಾಯಿತು. ಈ ವೇಳೆ, ಬೆಂಗಳೂರಿನ ಪ್ರತಿಪಕ್ಷಗಳ ಶಾಸಕರು ತಮ್ಮ ಕ್ಷೇತ್ರಗಳಿಗೆ ಅನುದಾನ ಕಡಿತ ಮಾಡಲಾಗಿದೆ ಎಂದು ಆರೋಪಿಸಿ ಅದನ್ನು ಸರಿಪಡಿಸುವಂತೆ ಒತ್ತಾಯಿಸಿ, ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾದರು. ಅದಲ್ಲದೇ ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಯೋಜನೆಗಳನ್ನು ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸುವ ಕುರಿತು ಜೆಡಿಎಸ್‌ನ ಮೂವರು ಸದಸ್ಯರು ಆರು ನಿಮಿಷ ಮಾತನಾಡಿದರು.
Related Articles
ವಿಧಾನ ಪರಿಷತ್: ನೆರೆ ಪರಿಹಾರ ಸಂಬಂಧ ಪ್ರತಿಪಕ್ಷಗಳ ಬೇಡಿಕೆಯನ್ನು ಈಡೇರಿಸಲಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸಿದರು. ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಕೇಂದ್ರದಿಂದ ವಿಶೇಷ ಅನುದಾನ ಬರುವಂತೆ ಮಾಡಿ ಎಂದು ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಮಾಡಿದ ಒತ್ತಾಯವನ್ನು ರಾಜ್ಯ ಸರ್ಕಾರ ತಿರಸ್ಕರಿಸಿರುವುದಕ್ಕೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು.
Advertisement
ಎಸ್.ಆರ್.ಪಾಟೀಲ್ ಮಾತನಾಡಿ, ರಾಜ್ಯ ಸರ್ಕಾರ ನಮ್ಮ ಯಾವುದೇ ಬೇಡಿಕೆಯನ್ನು ಈಡೇರಿಸಿಲ್ಲ. ಭೀಕರ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ಬಗ್ಗೆ ಚಿಂತನೆ ನಡೆಸಲು ಸರ್ಕಾರ ಒಪ್ಪುತ್ತಿಲ್ಲ. ಮನೆ ಕಳೆದುಕೊಂ ಡವರಿಗೆ 5 ಲಕ್ಷದ ಬದಲಿಗೆ 10 ಲಕ್ಷ ರೂ.ನೀಡ ಬೇಕು ಎಂದು ಕೋರಿಕೊಂಡಿದ್ದೇವೆ. ಇದ್ಯಾವು ದಕ್ಕೂ ಸರ್ಕಾರ ಒಪ್ಪಿಲ್ಲ. ಹೀಗಾಗಿಯೇ, ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಜೆಡಿಎಸ್ ಧರಣಿ: ರಾಜ್ಯದಲ್ಲಿ 50 ಸಾವಿರಕ್ಕೂ ಅಧಿಕ ಶಾಲಾ ಕಟ್ಟಡಗಳು ಶಿಥಿಲಗೊಂಡಿವೆ. ಮಕ್ಕಳು ಬಯಲಲ್ಲಿ ವಿದ್ಯಾರ್ಜನೆ ಮಾಡಬೇ ಕಾದ ಸ್ಥಿತಿ ಎದುರಾಗಿದೆ ಎಂದು ಜೆಡಿಎಸ್‌ನ ಶ್ರೀಕಂಠೇಗೌಡ ಪ್ರಸ್ತಾಪಿಸುತ್ತಿದ್ದಂತೆ, ಇದಕ್ಕೆ ಈಗಾಗಲೇ ಉತ್ತರ ನೀಡಲಾಗಿದೆ. ಪದೇಪದೆ ಕೇಳುವ ಅಗತ್ಯವಿಲ್ಲ ಎಂದ ಆಡಳಿತ ಪಕ್ಷದ ಸದಸ್ಯರು ಮುಗಿಬಿದ್ದರು. ಆಗ ಜೆಡಿಎಸ್ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸಲು ಮುಂದಾದರು.
ಕಂದಾಯ ಸಚಿವ ಆರ್.ಅಶೋಕ್ ಅವರು, ಶಿಥಿಲಗೊಂಡಿರುವ ಎಲ್ಲ ಶಾಲೆಗಳಿಂದ ಮಕ್ಕಳನ್ನು ಬೇರೆಡೆಗೆ ಸ್ಥಳಾಂತರ ಮಾಡಿದ್ದೇವೆ. ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದೇವೆ. ತುರ್ತಾಗಿ ಕಲ್ಯಾಣಮಂಟಪ ಇತ್ಯಾದಿ ಕಡೆಗಳಲ್ಲಿ ಪಾಠಕ್ಕೆ ವ್ಯವಸ್ಥೆ ಮಾಡಿದ್ದೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ಅಡ್ಡಿ ಆಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರತಿಪಕ್ಷದ ಪ್ರತಿಭಟನೆಯ ನಡುವೆಯೇ ಕರ್ನಾಟಕ ಧನ ವಿನಿಯೋಗ (ಸಂಖ್ಯೆ.3) ವಿಧೇ ಯಕ-2019, ಕರ್ನಾಟಕ ಧನ ವಿನಿಯೋಗ (ಸಂಖ್ಯೆ.4) ವಿಧೇಯಕ-2019 ಹಾಗೂ ಕರ್ನಾಟಕ ಸರಕು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ-2019ನ್ನು ಮುಖ್ಯಮಂತ್ರಿಗಳು ಮಂಡಿಸಿ, ಸದನದ ಅಂಗೀಕಾರ ಪಡೆದರು.
“ರಾಷ್ಟ್ರೀಯ ವಿಪತ್ತಾಗಿ ಘೋಷಿಸಲಾಗದು’ವಿಧಾನ ಪರಿಷತ್: ರಾಜ್ಯದಲ್ಲಿ ಸಂಭವಿಸಿರುವ ಪ್ರವಾಹ ಮತ್ತು ಮಳೆಹಾನಿಯನ್ನು ರಾಷ್ಟ್ರೀಯ ವಿಪತ್ತಾಗಿ ಘೋಷಿಸಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. ಪ್ರವಾಹ ಪರಿಹಾರ ಕುರಿತ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಪ್ರತಿಪಕ್ಷ ಸದಸ್ಯರು ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಬೇಡಿಕೆ ಇಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ, ರಾಷ್ಟ್ರೀಯ ವಿಪತ್ತು ಘೋಷಿಸಲು ಸಾಧ್ಯ ವಿಲ್ಲ. ಅದಕ್ಕಾಗಿ ಹಲವು ನಿಯಮಗಳಿವೆ ಎಂದು ಹೇಳಿದರು. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನಿಯಮ ಗಳು ಪ್ರತಿ ಐದು ವರ್ಷಕ್ಕೆ ಪರಿಷ್ಕರಣೆಯಾಗುತ್ತಿರುತ್ತವೆ. ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹಕ್ಕೆ ಎಲ್ಲ ರೀತಿಯ ಪರಿಹಾರ ಕಾರ್ಯ ಕೈಗೊಂಡಿದ್ದೇವೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಮಾತನಾಡಿದ ಪ್ರತಿ ಪಕ್ಷದ ನಾಯಕ ಎಸ್. ಆರ್. ಪಾಟೀಲ್ ಮಾತನಾಡಿ, ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಜನತೆಗೆ ಸೂಕ್ತ ಪರಿಹಾರ ನೀಡಲು ಮತ್ತು ಅವರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ, ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿದರೆ, ಕೇಂದ್ರದಿಂದ ಹೆಚ್ಚುವರಿ ಅನುದಾನ ದೊರೆಯುತ್ತದೆ ಎಂದು ಒತ್ತಾಯಿಸಿದರು. ಇದಕ್ಕೆ ದನಿಗೂಡಿಸಿದ ಕಾಂಗ್ರೆಸ್ ಸದಸ್ಯ ಬಸವರಾಜ ಇಟಗಿ, ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರವೇ ಘೋಷಣೆ ಮಾಡಬೇಕು. ಆದರೆ, ರಾಜ್ಯ ಸರ್ಕಾರ ಈ ಸಂಬಂಧ ಒಂದು ನಿರ್ಧಾರ ತೆಗೆದುಕೊಂಡು ಕೇಂದ್ರಕ್ಕೆ ಸಲ್ಲಿಸಬಹುದಲ್ಲ ಎಂದು ಕೋರಿಕೊಂಡರು. ಜೆಡಿಎಸ್ ಸದಸ್ಯ ಟಿ.ಎ.ಶರವಣ ಎದ್ದುನಿಂತು, ಕನಿಷ್ಠ ರಾಜ್ಯ ಸರ್ಕಾರವಾದರೂ ಈ ಸಂಬಂಧ ನಿರ್ಧಾರ ತೆಗೆದುಕೊಂಡು ಕೇಂದ್ರ ಕಳುಹಿಸಬಹುದಲ್ಲವೇ? ಎಂದು ಪ್ರಶ್ನಿಸಿದರು. ಸಚಿವ ಮಾಧುಸ್ವಾಮಿ ಮಾತನಾಡಿ, ರಾಷ್ಟ್ರೀಯ ವಿಪತ್ತು ಘೋಷಣೆ ಯಾವಾಗ ಮಾಡಬೇಕು ಮತ್ತು ಅದರ ನಿಯಮ ಗಳೇನಾದರೂ ನಿಮಗೆ ತಿಳಿದಿದೆಯೇ ಹೇಳಿ ನೋಡೋಣ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶರವಣ, ನಮಗೆ ಅದರ ಬಗ್ಗೆ ಗೊತ್ತಿಲ್ಲ. ನೀವೇ ಹೇಳಿ ಎನ್ನುತ್ತಿದ್ದಂತೆ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿಯವರು ಮಧ್ಯಪ್ರವೇಶಿಸಿ ಚರ್ಚೆಗೆ ತೆರೆ ಎಳೆದರು.