Advertisement

ಕೊಡಗು: ಆಹಾರ ಅರಸಿ ಬಂದ ಮೂರು ಕಾಡಾನೆ ಸಾವು

06:01 PM Mar 15, 2018 | Team Udayavani |

ಕೊಡಗು: ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದ ಮೂರು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನಾಲ್ಕೇರಿ ಎಂಬಲ್ಲಿ ನಡೆದಿದೆ.

Advertisement

ಕಾಡಿನಿಂದ ಆಹಾರ ಅರಸಿ ಬಂದ 2 ಕಾಡಾನೆಗಳ ಕಳೇಬರ ಕಾಫಿ ತೋಟದಲ್ಲಿ ಪತ್ತೆಯಾಗಿದ್ದರೆ, ಮತ್ತೊಂದು ಆನೆ ಕೆರೆಯ ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಸ್ಥಳಕ್ಕೆ ಪೊನ್ನಂಪೇಟೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next