ಹುಬ್ಬಳ್ಳಿ:ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕುಲ ರಸ್ತೆ ಪೊಲೀಸರು ಸೋಮವಾರ ಮೂವರು ಕಾಶ್ಮೀರಿ ಕಾಶ್ಮೀರಿ ವಿದ್ಯಾರ್ಥಿಗಳನ್ನು ಭಾನುವಾರ ತಡರಾತ್ರಿ ಮತ್ತೆ ಬಂಧಿಸಿದ್ದು, ಸೋಮವಾರ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಇಲ್ಲಿನ 3ನೇ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಾಧೀಶೆ ಪುಷ್ಪಾ ಅವರು ಮೂವರು ವಿದ್ಯಾರ್ಥಿಗಳನ್ನು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ ಎಂದು ವರದಿ ತಿಳಿಸಿದೆ.
ಹುಬ್ಬಳ್ಳಿ ತಾಲೂಕು ಕೊಟಗುಣಸಿಯಲ್ಲಿರುವ ಕೆಎಲ್ ಇ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಪುಲ್ವಾಮಾ ದಾಳಿಯ ಕರಾಳ ದಿನಾಚರಣೆ ಸಂದರ್ಭದಲ್ಲೂ ಕಾಶ್ಮೀರಿ
ಸಂಭ್ರಮಾಚರಣೆ ಮಾಡಿದ್ದಾರೆ. ಅಲ್ಲದೆ ಪಾಕಿಸ್ತಾನ ಜಿಂದಾಬಾದ್, ಕಾಶ್ಮೀರಿ ಆಜಾದಿ ಕರೆಂಗೆ ಎಂಬ ಘೋಷಣೆಗಳನ್ನು ಕೂಗುತ್ತ ಅದನ್ನು ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹಾಕಿಕೊಂಡಿ.
ಆ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ಕಾಲೇಝಿನ ಪ್ರಾಂಶುಪಾಲರು ಗೋಕುಲ ರಸ್ತೆ ಠಾಣೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಗೋಕುಲ ರಸ್ತೆ ಪೊಲೀಸರು ಶನಿವಾರ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಸಿಆರ್ ಪಿಸಿ ಕಾಯ್ದೆ 169ರ ಅಡಿ ಸ್ಟೇಶನ್ ಜಾಮೀನು ನೀಡಿ ಬಿಡುಗಡೆಗೊಳಿಸಿದ್ದರು. ಆದರೆ ಈ ಪ್ರಕರಣದ ಬಗ್ಗೆ ಪೊಲೀಸರು ಸರಿಯಾದ ಮಾಹಿತಿ ನೀಡದೆ ಇದ್ದ ಪರಿಣಾಮ ಗೊಂದಲ ಉಂಟಾಗಿ, ಹಿಂದುಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.