Advertisement

Exams; ಇನ್ನು ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಮೂರು ವಾರ್ಷಿಕ ಪರೀಕ್ಷೆ; ಇಲ್ಲಿದೆ ಮಾಹಿತಿ

02:42 PM Sep 05, 2023 | Team Udayavani |

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವತಿಯಿಂದ ಎಸ್ ಎಸ್ಎಲ್ ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು 2023-24 ನೇ ಶೈಕ್ಷಣಿಕ ಸಾಲಿನಿಂದ ತರಲು ತೀರ್ಮಾನಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿಗೆ ಎಸ್ ಎಸ್ಎಲ್ ಸಿ ಮತ್ತು ಪಿಯುಸಿಗೆ ತಲಾ ಮೂರು ಪರೀಕ್ಷೆ ನಡೆಸುವ ಸಂಬಂಧ ಮಂಗಳವಾರ ಆದೇಶ ಹೊರಡಿಸಲಾಗಿದೆ.

Advertisement

ಹಾಲಿ ಪರೀಕ್ಷಾ ಪದ್ಧತಿಯಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರ್ಷಿಕ ಪರೀಕ್ಷೆ ಮತ್ತು ಒಂದು ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪದ್ಧತಿಯ ಪರೀಕ್ಷೆಯು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿದೆ. ಆದರೆ ಇನ್ನು ಮೂರು ಪರೀಕ್ಷೆಗಳಿಗೆ ಅವಕಾಶವಿದ್ದು, ಅದರಲ್ಲಿ ಗಳಿಸಿದ ಉತ್ತಮ ವಿಷಯವಾರು ಅಂಕವನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ:ODI World Cup: ಭಾರತ ತಂಡ ಪ್ರಕಟ; ಕೆಎಲ್ ರಾಹುಲ್ ಗೆ ಸ್ಥಾನ; ಅನುಭವಿಗಳಿಗೆ ಸಿಗದ ಅವಕಾಶ

ಪುಸ್ತುತ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಯು ಗಳಿಸಿದ ಅಂಕಗಳಿಂದ ತೃಪ್ತರಾಗದಿದ್ದರೆ, ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ತಿರಸ್ಕರಿಸಲು ಅವಕಾಶವಿದೆ. ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ ಪೂರಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ವಿದ್ಯಾರ್ಥಿಯ ಅಂತಿಮ ಅಂಕಗಳೆಂದು ಪರಿಗಣಿಸಲಾಗುತ್ತಿದೆ. ಆದರೆ ಎರಡು ಪರೀಕ್ಷೆಗಳಲ್ಲಿ ತನ್ನ ಅತ್ಯುತ್ತಮ ಅಂಕವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗೆ ಯಾವುದೇ ಆಯ್ಕೆಯಿರುಲಿಲ್ಲ.

ಆದರೆ ಈ ವ್ಯವಸ್ಥೆಯಲ್ಲಿ 1, 2, ಮತ್ತು 3 ಪರೀಕ್ಷೆಗಳಲ್ಲಿ ಗಳಿಸಿದ ವಿಷಯವಾರು ಅಂಕವನ್ನು ಉಳಿಸಿಕೊಳ್ಳಲು ಅವಕಾಶವನ್ನು ಒದಗಿಸಿಲಾಗುತ್ತದೆ.

Advertisement

ಹೆಸರು ಬದಲು: ಮೂರನೆಯದಾಗಿ’ ಪೂರಕ ಪರೀಕ್ಷೆ’ ಎಂಬ ಹೆಸರಿನ ಬದಲಿಗೆ “ವಾರ್ಷಿಕ ಪರೀಕ್ಷೆ 1, 2, ಮತ್ತು 3” ಎಂದು ಹೆಸರಿಸಲಾಗಿದೆ.

ಈ ಸುಧಾರಣಾ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾರ್ಗಸೂಚಿಯನ್ನು ಸುತ್ತೋಲೆಯ ಮೂಲಕ ಮಂಡಲಿಯಿಂದ ನೀಡಲಾಗುವುದು. ಈ ಮೂರು ಪರೀಕ್ಷೆಗಳಲ್ಲಿ ವಿಷಯ ಮತ್ತು ಕಠಿಣತೆಯ ಮಟ್ಟದಲ್ಲಿ ಏಕರೂಪತೆಯನ್ನು ಕಾಯ್ದುಕೊಳ್ಳಲಾಗುವುದು. ಈ ಮೂರು ಪ್ರಯತ್ನಗಳಲ್ಲಿ ಗಳಿಸಿದ ಅಂಕಗಳಲ್ಲಿ ವಿಷಯವಾರು ಅತ್ಯುತ್ತಮವಾದುದನ್ನು ಆಯ್ಕೆಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಮತ್ತು ಮುಂದಿನ ಶೈಕ್ಷಣಿಕ ವರ್ಷದಲ್ಲಿ ತಡವಾಗಿ ದಾಖಲಾಗುವ ಪ್ರಥಮ ಪಿ.ಯು.ಸಿ ಅಥವಾ ಪದವಿ ವಿದ್ಯಾರ್ಥಿಗಳಿಗೆ ಸೇತುಬಂಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.

10ನೇ ಮತ್ತು 12 ತರಗತಿ ಪರೀಕ್ಷೆ ಸಂಭವನೀಯ ವೇಳಾಪಟ್ಟಿ

 

Advertisement

Udayavani is now on Telegram. Click here to join our channel and stay updated with the latest news.

Next