ಬೆಂಗಳೂರು: ವಿಜಯಪುರದ ಮಾಜಿ ಶಾಸಕ ಮನೋಹರ ಐನಾಪುರ, ಕೊಳ್ಳೇಗಾಲದ ಮಾಜಿ ಶಾಸಕ ನಂಜುಂಡಸ್ವಾಮಿ ಹಾಗೂ ದೊಡ್ಡಬಳ್ಳಾಪುರದ ಮಾಜಿ ಶಾಸಕ ಹಾಗೂ ಕೊಳಗೇರಿ ನಿರ್ಮೂಲನ ಮಂಡಳಿ ಮಾಜಿ ಅಧ್ಯಕ್ಷ ಜೆ. ನರಸಿಂಹಸ್ವಾಮಿ ಅವರು ಮಂಗಳವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ.
ನಂಜುಂಡಸ್ವಾಮಿ ಕೊಳ್ಳೇಗಾಲದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಎಸ್‌ಪಿಯಿಂದ ಆಯ್ಕೆಯಾಗಿದ್ದ ಎನ್. ಮಹೇಶ್ ಬಿಜೆಪಿ ಸೇರಿರುವುದರಿಂದ ಟಿಕೆಟ್ ಸಿಗುವ ಸಾಧ್ಯತೆಗಳಿಲ್ಲ. ಹೀಗಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ. ಇನ್ನು ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ಇತ್ತೀಚೆಗೆ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರಲಿಲ್ಲ. ಅವರ ನಡೆ ಈಗ ಕಾಂಗ್ರೆಸ್ ಕಡೆ ವಾಲಿದೆ. ಪಕ್ಷ ಸೇರುತ್ತಿರುವ ಈ ಮೂವರು ಮಾಜಿ ಶಾಸಕರಿಗೆ ಟಿಕೆಟ್ ಖಾತರಿ ನೀಡಿಲ್ಲವೆಂದು ಪಕ್ಷದ ಮೂಲಗಳು ತಿಳಿಸಿವೆ.