ಇಂಫಾಲ್: ಮಣಿಪುರದ ರಾಜಧಾನಿ ಇಂಫಾಲ್‌ನ ನ್ಯೂ ಲಂಬುಲೇನ್ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅಪರಿಚಿತ ವ್ಯಕ್ತಿಗಳು ಮೂರು ಪರಿತ್ಯಕ್ತ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.ಅಗ್ನಿಶಾಮಕ ಸಿಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ನಂತರ, ಜನರು ಆ ಪ್ರದೇಶದಲ್ಲಿ ಜನರು ಜಮಾಯಿಸಿದರು ಮತ್ತು ಪ್ರದೇಶಕ್ಕೆ ಪ್ರವೇಶಿಸಲು ರಾಜ್ಯ ಮತ್ತು ಕೇಂದ್ರ ಪಡೆಗಳನ್ನು ನಿಯೋಜಿಸಬೇಕೆಂದು ಒತ್ತಾಯಿಸಿದರು ಎಂದು ಅಧಿಕಾರಿಗಳು ಹೇಳಿದರು. ಭದ್ರತಾ ಪಡೆಗಳು ಗುಂಪನ್ನು ಚದುರಿಸಲು ಕೆಲವು ಸುತ್ತು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು.
ಮತ್ತೊಂದು ಬೆಳವಣಿಗೆಯಲ್ಲಿ, ಭಾನುವಾರ ಮುಂಜಾನೆ 2 ಗಂಟೆ ಸುಮಾರಿಗೆ ಮಾಜಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶಕ ಕೆ. ರಾಜೋ ಅವರ ನಿವಾಸವನ್ನು ಕಾವಲು ಕಾಯುತ್ತಿದ್ದ ಭದ್ರತಾ ಸಿಬಂದಿಯಿಂದ ಅಪರಿಚಿತ ವ್ಯಕ್ತಿಗಳು ಮೂರು ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂಫಾಲ್ ಪಶ್ಚಿಮ ಜಿಲ್ಲೆಯ ಇಂಫಾಲ್ ಠಾಣಾ ವ್ಯಾಪ್ತಿಯ ಸಗೋಲ್‌ಬಂದ್ ಬಿಜೋಯ್ ಗೋವಿಂದ ಎಂಬಲ್ಲಿ ಈ ಘಟನೆ ನಡೆದಿದ್ದು, ಕಸಿದುಕೊಂಡ ಶಸ್ತ್ರಾಸ್ತ್ರಗಳಲ್ಲಿ ಎರಡು ಎಕೆ ಸಿರೀಸ್ ರೈಫಲ್‌ಗಳು ಮತ್ತು ಕಾರ್ಬೈನ್ ಸೇರಿವೆ.ಘಟನೆ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏತನ್ಮಧ್ಯೆ, ಪೊಲೀಸರು ಶಸ್ತ್ರಾಸ್ತ್ರಗಳನ್ನು ಹಿಂಪಡೆಯಲು ಮತ್ತು ಭಾಗಿಯಾಗಿರುವವರನ್ನು ಬಂಧಿಸಲು ಹಲವು ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ್ದಾರೆ.