Advertisement

ವಿಟ್ಲ: ಅಕ್ರಮವಾಗಿ ಮಾದಕ ವಸ್ತು ಸಾಗಾಟ: ಮೂವರು ಅಂತಾರಾಜ್ಯ ಡ್ರಗ್ ಪೆಡ್ಲರ್ ಗಳ ಬಂಧನ

04:48 PM Jul 02, 2022 | Team Udayavani |

ವಿಟ್ಲ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳಾದ ಎಂಡಿಎಮ್ಎ, ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

Advertisement

ಬಂಧಿತರನ್ನು ಮೂಲತಃ ನೆಲ್ಲಿಗುಡ್ಡೆ ನಿವಾಸಿ ಡ್ರಗ್ ಪೆಡ್ಲರ್ ರಹಿಮಾನ್, ಸಾಲೆತ್ತೂರು ಸಮೀಪದ ಕಟ್ಟತ್ತಿಲ ಜಲಾಲುದ್ಧಿನ್, ಒಕ್ಕೆತ್ತೂರು ಪೈಝಲ್ ಎಂದು ಗುರುತಿಸಲಾಗಿದೆ.

ಬಂಧಿತರಿಂದ ಸಾವಿರಾರು ರೂ ಮೌಲ್ಯದ ಎಂಡಿಎಮ್ಎ, ಗಾಂಜಾ, ಒಂದು ಆಟೋ ರಿಕ್ಷಾ ಹಾಗೂ ಒಂದು ತಲವಾರನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಶೀಘ್ರವೇ BJP ಸೇರ್ಪಡೆ; ಕ್ಯಾ.ಅಮರೀಂದರ್ ಸಿಂಗ್ NDA ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ?

ಬಂಧಿತ ಆರೋಪಿಗಳ ವಿರುದ್ಧ ಈಗಾಗಲೇ ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೇರಳದಿಂದ ಕರ್ನಾಟಕ ಭಾಗಗಳಿಗೆ ಮಾದಕ ವಸ್ತುಗಳನ್ನು ಸಾಗಾಟ ಮಾಡುವ ಇವರು ಅಂತಾರಾಜ್ಯ ಡ್ರಗ್ ಪೆಡ್ಲರ್ ಗಳಾಗಿದ್ದಾರೆ.

Advertisement

ಕಾರ್ಯಾಚರಣೆಯಲ್ಲಿ ವಿಟ್ಲ ಠಾಣಾ ಸಬ್ ಇನ್ಸ್ ಪೆಕ್ಟರ್ ಸಂದೀಪ್, ಮಂಜುನಾಥ್, ಪೊಲೀಸರಾದ ಹೇಮರಾಜ್, ಅಶೋಕ್, ವಿಟ್ಠಲ್ ಅವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next