Advertisement

ಕಾಶ್ಮೀರದಲ್ಲಿ ಮೂವರು ಜೈಶ್‌ ಉಗ್ರರ ಬಂಧನ

11:10 AM Mar 26, 2019 | Lakshmi GovindaRaju |

ನವದೆಹಲಿ: ಶ್ರೀನಗರ-ಬಾರಾಮುಲ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜೈಶ್‌ ಎ ಮೊಹಮ್ಮದ್‌ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ನರಬಾಲ್‌ ಚೆಕ್‌ ಪಾಯಿಂಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಅವರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಶುಕ್ರವಾರ, ಶೋಪಿಯಾನ್‌ ಜಿಲ್ಲೆಯಲ್ಲಿ ಇಬ್ಬರು ಜೈಶ್‌ ಎ ಮೊಹಮ್ಮದ್‌ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದವು. ಹಾಗಾಗಿ, ಸುತ್ತಮುತ್ತಲಿನ ಎಲ್ಲಾ ಪ್ರಾಂತ್ಯಗಳಲ್ಲೂ ತಪಾಸಣೆ ಹೆಚ್ಚಿಸಲಾಗಿತ್ತು. ಈ ತಪಾಸಣೆ ಸಂದರ್ಭದಲ್ಲೇ, ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ಮೂವರು ಉಗ್ರರು ಸಿಕ್ಕಿಹಾಕಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next