Advertisement

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

04:51 PM Oct 16, 2021 | Team Udayavani |

ಶಿವಮೊಗ್ಗ: ಆಯುಧ ಪೂಜೆ, ವಿಜಯ ದಶಮಿ ಬೆನ್ನಲ್ಲೇ ವೀಕೆಂಡ್, ಹೀಗೆ ಸಾಲು ಸಾಲು ರಜೆಗಳ ಕಾರಣದಿಂದ ಜನರು ಪ್ರವಾಸಿ ಸ್ಥಳಗಳತ್ತ ಮುಖ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಿಗಂದೂರು ಹಾಗೂ ಜೋಗ ಜಲಪಾತ ನೋಡಲು ಪ್ರವಾಸಿಗರು ಮುಗಿ ಬೀಳುತ್ತಿದ್ದಾರೆ.

Advertisement

ಪ್ರವಾಸಿಗರ ಸಂಖ್ಯೆ ಏಕಾಏಕಿ ಹೆಚ್ಚಾದ ಹಿನ್ನೆಲೆ ಸಾಗರದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಯಿತು. ಪ್ರವಾಸಿಗರ ವಾಹನಗಳಿಂದಾಗಿ ಸಾಗರದ ಎಲ್ಲ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಗೆ ಕಾರಣವಾಯಿತು.

ಸಾಗರದ ಬಸ್ ನಿಲ್ದಾಣದ ಬಳಿಯಿಂದ ಐಬಿ ಸರ್ಕಲ್ ವರೆಗೆ ಮೂರು ಕಿಲೋಮೀಟರ್ ಟ್ರಾಫಿಕ್‌ ಜಾಮ್ ಉಂಟಾಗಿ, ಸಾವಿರಾರು ವಾಹನಗಳು ಪರದಾಡಿದವು.

ಇದನ್ನೂ ಓದಿ:ಸಾಲು ಸಾಲು ರಜೆ: ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ದಂಡು!

ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರೂ ನಿಯಂತ್ರಣ ಮಾಡುವುದೇ ಸಮಸ್ಯೆಯಾಯಿತು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next