Advertisement

ಮಗಳ ಮದುವೆಗೆ ಸಾಲ; ಸವಣೂರಿನಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

12:30 PM Feb 23, 2023 | Team Udayavani |

ಹಾವೇರಿ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ‌ಜಿಲ್ಲೆಯ ಸವಣೂರು ತಾಲ್ಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.

Advertisement

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರನ್ನು ಒಂದೇ ಕುಟುಂಬದ ತಂದೆ ಹನುಮಂತಗೌಡ ಪಾಟೀಲ (54 ವ) ತಾಯಿ ಲಲಿತಾ ಪಾಟೀಲ (50 ವ) ಮತ್ತು ಮಗಳು ನೇತ್ರಾ ಪಾಟೀಲ (22 ವ) ಎಂದು‌ ತಿಳಿದು ಬಂದಿದೆ.

ಹನುಮಂತಗೌಡ ಪಾಟೀಲ ಸಾಲಮಾಡಿ ಮಗಳ ಮದುವೆ ಮಾಡಿದ್ದರು ಎನ್ನಲಾಗಿದೆ.

ಸಾಲಬಾಧೆ ತಾಳಲಾರದೆ ತಂದೆ, ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ತನ್ನಿಂದ ತಂದೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನೊಂದು ಮಗಳು ನೇತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹನುಮಂತಗೌಡ ಪಾಟೀಲ ಸುಮಾರು 25 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎನ್ನಲಾಗುತ್ತಿದೆ.

ಇದನ್ನೂ ಓದಿ:ಸಿದ್ದರಾಮಯ್ಯ ಜಾತಿ ಧರ್ಮದ ರಾಜಕಾರಣ ಬಿಟ್ಟು ಬೇರೆ ಏನೂ ಮಾಡಿಲ್ಲ: ಶೋಭಾ ಕರಂದ್ಲಾಜೆ

Advertisement

ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next