Advertisement

3 ಉಗ್ರರು ಹತ, ಓರ್ವ ಯೋಧ ಹುತಾತ್ಮ

08:55 AM Sep 28, 2018 | Karthik A |

ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್‌ನಾಗ್‌ ಮತ್ತು ಬದ್ಗಾಂ ಜಿಲ್ಲೆಗಳಲ್ಲಿ ಉಗ್ರರು ಮತ್ತು ಸೇನೆ ನಡುವೆ ನಡೆದ ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಅನಂತ್‌ನಾಗ್‌ನ ಖಾಜಿಗುಂಡ್‌ ಜಿಲ್ಲೆಯಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿತು. ಈ ವೇಳೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದು, ಎರಡೂ ಬದಿಯಿಂದ ಗುಂಡಿನ ಚಕಮಕಿ ನಡೆಯಿತು. ಪರಿಣಾಮ ಓರ್ವ ಯೋಧ ಹುತಾತ್ಮನಾಗಿದ್ದು, ಒಬ್ಬ ಉಗ್ರನನ್ನು ಸೇನೆ ಹೊಡೆದುರುಳಿಸಿದೆ. ಬದ್ಗಾಂನ ಪಂಜಾನ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next