Advertisement

ಗಣಿಜಿಲ್ಲೆ ಬಳ್ಳಾರಿಯಲ್ಲಿ ಮತ್ತೆ ಮೂರು ಕೋವಿಡ್ 19 ಸೋಂಕು ಪ್ರಕರಣ ಪತ್ತೆ

03:18 PM May 23, 2020 | keerthan |

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ ಮೂರು ಕೋವಿಡ್-19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಪ್ರಕರಣಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

Advertisement

ನಗರ ಹೊರವಲಯದ ಅಲ್ಲೀಪುರ ವಸತಿ ನಿಲಯದಲ್ಲಿ ಕ್ವಾರಂಟೈನ್ ನಲ್ಲಿ ಇದ್ದ ಇಬ್ಬರು ಪುರುಷ, ಒಬ್ಬ ಮಹಿಳೆಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ. ಸೋಂಕಿತ ಮೂವರು ದೆಹಲಿ, ಮುಂಬೈನಿಂದ ಬಂದಿರುವ ಟ್ರಾವೆಲ್ ಹಿಸ್ಟರಿಯನ್ನು ಹೊಂದಿದ್ದಾರೆ. ಸೋಂಕಿತ ಮೂವರನ್ನು ಇದೀಗ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ.

ಇಂದಿನ ಮೂರು ಸೇರಿ ಈವರೆಗೆ ಒಟ್ಟು 33 ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, ಇವರಲ್ಲಿ ಹೊಸಪೇಟೆಯ ಒಂದೇ ಕುಟುಂಬದ 11, ಬಳ್ಳಾರಿ ನಗರದ 2, ಸಂಡೂರು ತಾಲೂಕು ಕೃಷ್ಣಾನಗರ ಗ್ರಾಮದ 1, ಸಿರುಗುಪ್ಪ ತಾಲೂಕು ಎಚ್.ಹೊಸಳ್ಳಿ ಗ್ರಾಮದ 1  ಸೇರಿ ಒಟ್ಟು 15 ಜನರು ಬಿಡುಗಡೆಯಾಗಿ ಮನೆ ಸೇರಿದ್ದಾರೆ‌‍. ಒಬ್ಬರು ಮೃತಪಟ್ಟಿದ್ದು, 17 ಸಕ್ರೀಯ ಪ್ರಕರಣಗಳು ಇವೆ.

ರಾಜ್ಯದಲ್ಲಿ ಇಂದು ಹೊಸ 196 ಸೋಂಕು ಪ್ರಕರಣಗಳು ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ. 42 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇಬ್ಬರು ಸೋಂಕಿತರು ಕೋವಿಡ್-19 ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next