Advertisement

ಚಿಕ್ಕಮಗಳೂರು ಜಿಲ್ಲೆಯಲ್ಲಿಂದು ಕೋವಿಡ್-19 ಸೋಂಕಿಗೆ ಮೂವರು ಬಲಿ

05:18 PM Jul 24, 2020 | keerthan |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರು ಹೆಚ್ಚುತ್ತಿರುವಂತೆ ಸೋಂಕಿನಿಂದ ಸಾವನ್ನಪ್ಪುತ್ತಿರುವ ಜನರ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಇಂದು ಮೂವರು ಸಾವನ್ನಪ್ಪಿದ್ದಾರೆ.

Advertisement

ಜಿಲ್ಲೆಯಲ್ಲಿಂದು 28 ಮಂದಿಗೆ ಕೋವಿಡ್-19 ಪಾಸಿಟಿವ್ ಕಂಡುಬಂದಿದೆ. ಚಿಕ್ಕಮಗಳೂರಿನಲ್ಲಿ ಅತೀ ಹೆಚ್ಚು 18 ಮಂದಿಗೆ ಸೋಂಕು ತಾಗಿದ್ದರೆ, ಕಡೂರಿನಲ್ಲಿ 8 ಜನರಿಗೆ ಮತ್ತು  ಮೂಡಿಗೆರೆಯಲ್ಲಿ ಇಬ್ಬರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ 574 ಕ್ಕೆ ಏರಿಕೆಯಾಗಿದ್ದು, 243 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಜಿಲ್ಲೆಯಲ್ಲಿ ಇದುವರೆಗೆ ಸೋಂಕಿನಿಂದ 17 ಮಂದಿ ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next