Advertisement

ಇನ್ನೂ ಮೂರು ದಿನ ಮಳೆ

11:31 PM Oct 23, 2019 | Lakshmi GovindaRaju |

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಿಂದ ಕಳೆದ ಮೂರ್‍ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿತ್ತು. ಬುಧವಾರ ಮಳೆಯ ಪ್ರಮಾಣ ಕಡಿಮೆಯಾಗಿದೆ.

Advertisement

ಆದರೆ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಅ.24 ಮತ್ತು 25ರಂದು ಈ ಮೂರು ಜಿಲ್ಲೆಗಳಿಗೆ “ಆರೆಂಜ್‌ ಅಲರ್ಟ್‌’, ಅ.26 ಕ್ಕೆ “ರೆಡ್‌ ಅಲರ್ಟ್‌’ನ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next