Advertisement

ಕನ್ನಡ ಭಾಷೆ ಬೆಳವಣಿಗೆಗಾಗಿ ಮೂರು ಹೊಸ ಸೂತ್ರ ಅಳವಡಿಕೆ: ಕಸಾಪ ಅಧ್ಯಕ್ಷ ಮಹೇಶ್ ಜೋಶಿ

09:16 PM May 05, 2022 | Team Udayavani |

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಜನಸಾಮಾನ್ಯ ಪರಿಷತ್ತಾಗುವ ನಿಟ್ಟಿನಲ್ಲಿ “ಕನ್ನಡ-ಕನ್ನಡಿಗ-ಕರ್ನಾಟಕ’ ಎಂಬ ಮೂರು ಹೊಸ ಸೂತ್ರಗಳನ್ನು ಅಳವಡಿಸಿಕೊಂಡಿದ್ದು  ಅಷ್ಟು ದಿಕ್ಕಿಗೂ ಕನ್ನಡ  ಪಸರಿಸುವ ನಿಟ್ಟಿನಲ್ಲಿ ಹೆಜ್ಜೆಯಿರಿಸಿದೆ ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ್‌ ಜೋಶಿ ಹೇಳಿದ್ದಾರೆ.

Advertisement

ಗುರುವಾರ ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ  ಪರಿಷತ್ತಿನ 108ನೇ ಸಂಸ್ಥಾಪನ ದಿನಾಚರಣೆ ಹಾಗೂ ಶತಮಾನೋತ್ಸವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಈ ಹಿಂದೆ ಪರಿಷತ್ತು  ಕನ್ನಡ ಭಾಷೆ, ಸಾಹಿತ್ಯ ಕಲೆ, ಸಂಸ್ಕತಿ ಮತ್ತು ಜನಪದ ಇವುಗಳ ರಕ್ಷಣೆ ಎಂಬ ಪಂಚಸೂತ್ರಗಳನ್ನೊಳಗೊಂಡ ಕನ್ನಡ ಸಾಹಿತ್ಯ ಪರಿಷತ್ತಾಗಿತ್ತು. ಈಗ  ಕನ್ನಡ – ಕನ್ನಡಿಗ – ಕರ್ನಾಟಕ ಎಂಬ ಮೂರು ಹೊಸ ಸೂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಕೆ ಮಾಡಿಕೊಂಡು ಕನ್ನಡ ಕಟ್ಟುವ ಕೆಲಸ ನಡೆದಿದೆ ಎಂದರು.

ಕವಿ ದೊಡ್ಡರಂಗೇಗೌಡ ಮಾತನಾಡಿ, ಕನ್ನಡ ನಾಡಿನಲ್ಲಿ ಕನ್ನಡ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಆಡಳಿತದಲ್ಲಿರುವವರು ಈ ಸಂಗತಿಯನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಕನ್ನಡದ ಬದಲಿಗೆ ಆಂಗ್ಲ ಭಾಷೆಯಲ್ಲಿ ಟಿಪ್ಪಣಿಗಳು ಹೊರಡುತ್ತಿವೆ. ಇದನ್ನು ತಡೆಯಲು ಬಾಯಿ ಮಾತಿನಿಂದ ಸಾಧ್ಯವಿಲ್ಲ, ಆಂದೋಲನವೇ ನಡೆಯಬೇಕು. ಕನ್ನಡ ಬೆಳೆಸುವಲ್ಲಿ ಪರಿಷತ್ತು ಪುಸ್ತಕ ಸಂಸ್ಕೃತಿಯನ್ನ ಹೆಚ್ಚಿಸಬೇಕು ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ| ನೆಲ್ಲೂರು ಪ್ರಸಾದ್‌ ಅವರಿಗೆ ಶತಮಾನೋತ್ಸವ ದತ್ತಿ ಪ್ರಶಸ್ತಿ, ಜಗನ್ನಾಥ ಹೇಮಾದ್ರಿ, ಮಂಜಯ್ಯ, ರಾಜು ಅವರಿಗೆ ವಿ.ಗೌರಮ್ಮ ಗಂಗಾಧರಯ್ಯ ದತ್ತಿ ಪ್ರಶಸ್ತಿ ಹಾಗೂ  ಮಂ.ಅ. ವೆಂಕಟೇಶ್‌ ಮತ್ತು ಶೋಭಾ ಅವರಿಗೆ ಕನ್ನಡ ಪರಿಚಾರಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next