Advertisement

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

01:39 AM May 20, 2024 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಮೆಂದಾರ್‌ನಲ್ಲಿ ನ್ಯಾಶನಲ್‌ ಕಾನ್ಫರೆನ್ಸ್‌ ಆಯೋ ಜಿಸಿದ್ದ ರೋಡ್‌ ಶೋ ವೇಳೆ 2 ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಈ ಸಂದರ್ಭದಲ್ಲಿ ಪಕ್ಷದ 3 ಕಾರ್ಯಕರ್ತರಿಗೆ ಚಾಕುವಿನಿಂದ ಇರಿಯಲಾಗಿದೆ.

Advertisement

ಈ ಘಟನೆ ನಡೆಯುವ ವೇಳೆ ಪಕ್ಷದ ಅಧ್ಯಕ್ಷ ಡಾ| ಫಾರೂಕ್‌ ಅಬ್ದುಲ್ಲಾ ಸ್ಥಳದಲ್ಲಿ ಇದ್ದರು. ಇದಕ್ಕಿದ್ದಂತೆ 2 ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು ಚಾಕುವಿನಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇದರಿಂದ ಮೂವರು ಗಾಯಗೊಂಡಿದ್ದು, ಅವರನ್ನು ರಜೌರಿಯ ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧಿಸಿದಂತೆ ಪೊಲೀಸರು ಕೇಸು ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸರಪಂಚ್‌ ಒಬ್ಬರನ್ನು ಉಗ್ರರು ಹತ್ಯೆಗೈದ ಮರುದಿನವೇ ಈ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next