Advertisement

ಚಿತ್ತೂರಿನಲ್ಲಿ ಅಪಘಾತ: ಡ್ರಗ್ ಸ್ಮಗ್ಲರ್ ನನ್ನು ಹಿಡಿಯಲು ಹೋದ ಬೆಂಗಳೂರಿನ 3 ಪೊಲೀಸರ ಸಾವು

09:37 AM Jul 24, 2022 | Team Udayavani |

ಬೆಂಗಳೂರು: ನೆರೆಯ ಆಂಧ್ರಪ್ರದೇಶದ ಚಿತ್ತೂರು ಬಳಿ ಭಾನುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನ ನಡೆದಿದೆ.

Advertisement

ಮೃತ ಪೊಲೀಸರೆಲ್ಲರೂ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಎಂದು ವರದಿಯಾಗಿದೆ.

ಶಿವಾಜಿ ನಗರ ಠಾಣೆ ಪೊಲೀಸ್ ಸಿಬ್ಬಂದಿಗಳು ಚಿತ್ತೂರಿನಲ್ಲಿ ಡ್ರಗ್ ದಂಧೆಕೋರನನ್ನು ಹಿಡಿಯಲು ತೆರಳುತ್ತಿದ್ದಾಗ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಪಿಎಸ್ಐ ಅವಿನಾಶ್​, ಕಾನ್ಸ್​ಟೇಬಲ್​ ಅನಿಲ್​​ ಮಲಿಕ್, ಕಾರು ಚಾಲಕನೊಬ್ಬ ಮೃತಪಟ್ಟಿದ್ದಾರೆ. ಪ್ರೊಬೆಷನರಿ ಪಿಎಸ್ಐ ದೀಕ್ಷಿತ್​​​, ಕಾನ್ಸ್​ಟೇಬಲ್​​ ಶರಣಬಸವಗೆ ಗಂಭೀರ ಗಾಯಗಳಾಗಿದ್ದು, ತಮಿಳುನಾಡಿನ ಸಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಿಎಸ್ಐ ಅವಿನಾಶ್ ನೇತೃತ್ವದಲ್ಲಿ ಪೊಲೀಸ್ ಟೀಂ ಆಂಧ್ರಕ್ಕೆ ತೆರಳಿತ್ತು.

ಇದನ್ನೂ ಓದಿ:ವಿಮಾನದಲ್ಲಿ ಐಪಿಎಸ್ ಅಧಿಕಾರಿಯ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲೆ

Advertisement

ಚಿತ್ತೂರಿನಿಂದ ತಿರುಮಲಕ್ಕೆ ಹೋಗುವ ರಸ್ತೆಯ ಪೂತಲಪಟ್ಟು ಮಂಡಲದ ಪಿ. ಕೊಟ್ಟಕೋಟ ರೈಲ್ವೆ ಕೆಳ ಸೇತುವೆ ಬಳಿ ಅಪಘಾತ ನಡೆದಿದೆ. ಪೊಲೀಸ್​ ಸಿಬ್ಬಂದಿ ಇದ್ದ ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಸುಮಾರು 30 ಅಡಿ ದೂರದ ಮತ್ತೊಂದು ರಸ್ತೆಗೆ ಹಾರಿ ಹೋಗಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಪೊಲೀಸ್​ ಸಿಬ್ಬಂದಿ ಹಾಗೂ ಓರ್ವ ಖಾಸಗಿ ಚಾಲಕ ಸಾವಿಗೀಡಾಗಿದ್ದಾರೆ. ಉಳಿದವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲಾ ಮುಖ್ಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸಾರ್ವಜನಿಕರ ಪ್ರಾಣ ಹಾಗೂ ಆಸ್ತಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ, ಪೊಲೀಸ್ ಸಿಬ್ಬಂದಿ ಮೃತ ಪಟ್ಟಿರುವುದು ಅತ್ಯಂತ ನೋವು ತಂದಿದೆ. ಕರ್ನಾಟಕದ ಪೊಲೀಸ್ ತಂಡವು ಅಪಘಾತದ ಸ್ಥಳಕ್ಕೆ ಧಾವಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮೃತದೇಹಗಳು ಹಾಗೂ ಗಾಯಾಳುಗಳನ್ನು ಬೆಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next