Advertisement

ಬೆಂಗಳೂರು: ಕುಸಿದುಬಿತ್ತು ಮೂರಂತಸ್ತಿನ ಮನೆ, ತಪ್ಪಿದ ಭಾರೀ ಅನಾಹುತ

02:39 PM Sep 27, 2021 | Team Udayavani |

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮೂರು ಅಂತಸ್ತಿನ ಮನೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ. ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡ ಕಾರಣದಿಂದ ಭಾರೀ ಅನಾಹುತವೊಂದು ತಪ್ಪಿದೆ.

Advertisement

ನಗರದ ಲಕ್ಕಸಂದ್ರ ಬಳಿ ಈ ಘಟನೆ ನಡೆದಿದೆ. ಹಳೇಯ ಕಟ್ಟಡ ಇದಾಗಿದ್ದು, ಎರಡು ವರ್ಷದ ಹಿಂದೆ ಸ್ವಲ್ಪ ವಾಲಿತ್ತು. ಸೋಮವಾರ ಬೆಳಗ್ಗೆ ಈ ಹಿಂದಿಗಿಂತಲೂ ಕಟ್ಟಡ ಹೆಚ್ಚು ವಾಲಿದ್ದು, ಅವಘಡದ ಮುನ್ಸೂಚನೆ ಅರಿತು ಮನೆಯಲ್ಲಿ ಇದ್ದವರೆಲ್ಲಾ ಹೊರಗೆ ಬಂದಿದ್ದರು.

ಮೆಟ್ರೋ‌ ಕಾಮಗಾರಿ ಮಾಡುತ್ತಿದ್ದ ಕಾರ್ಮಿಕರು ಈ ಕಟ್ಟಡದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಕಟ್ಟಡ ಕುಸಿಯುವುದಕ್ಕಿಂತ ಕೆಲ ಸಮಯ ಮೊದಲು ಅಗ್ನಿಶಾಮಕ ಸಿಬ್ಬಂದಿ ಜನರನ್ನು ತೆರವುಗೊಳಿಸಿದ್ದರು. ಹಳೇ ಕಟ್ಟಡ ಕುಸಿತದಿಂದ ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ:ಭಾರತ್ ಬಂದ್; ರಾಜ್ಯದ ವಿವಿಧೆಡೆ ನೀರಸ ಪ್ರತಿಕ್ರಿಯೆ, ದೆಹಲಿಯಲ್ಲಿ ಟ್ರಾಫಿಕ್ ಜಾಮ್

ಕಟ್ಟಡ ಧರಾಶಾಯಿಯಾಗುವ ದೃಶ್ಯ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವೈರಲ್‌ ಆಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next