Advertisement

ವಿದ್ಯುತ್ ಬಿಲ್ ನಲ್ಲಿ ಅಕ್ರಮವೆಸಗಿದ ಮೂವರ ಅಮಾನತು: ಸಚಿವ ಸುನಿಲ್ ಕುಮಾರ್

04:12 PM Sep 04, 2021 | Team Udayavani |

ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

Advertisement

ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿ ಗಾಯತ್ರಮ್ಮ, ಹಾಗೂ ಕಿರಿಯ ಸಹಾಯಕಿ ಸುಜಾತಮ್ಮ ಅಮಾನತಿಗೊಳಗಾದ ಸಿಬ್ಬಂದಿಯಾಗಿದ್ದಾರೆ.

ಇವರು ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟ ಉಂಟಾಗಲು ಕಾರಣರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮವೆಸಗಿ ಆ ಮೂಲಕ ಇಲಾಖೆಗೆ ನಷ್ಟ ಉಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಪ್ರಸ್ತುತ ಈ ಮೂವರು ಸಿಬ್ಬಂದಿಗಳು ಬೇರೆ, ಬೇರೆ ಐಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐಡಿ ಗಳನ್ನು ಉಪಯೋಗಿಸಿ ವಂಚನೆ ಎಸಗಿರುವುದು ದೃಢ ವಾಗಿರುವುದರಿಂದ ಹಾಗೂ 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 444966-00 ಗಳಷ್ಟು ಮೊತ್ತ  ಕಂಪನಿಗೆ ನಷ್ಟವಾಗಿರುವುದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ, ಜೊತೆಗೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆಯನ್ನು ಸಹ  ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next