Advertisement

ಕೋಲ್ಕತಾ: ಕೆಎಂಸಿ ಚುನಾವಣೆ ವೇಳೆ ಬಾಂಬ್ ಸ್ಫೋಟ; ಮೂವರಿಗೆ ಗಾಯ

12:54 PM Dec 19, 2021 | Team Udayavani |

ಕೋಲ್ಕತಾ: ಭಾನುವಾರ ನಡೆಯುತ್ತಿರುವ ಕೆಎಂಸಿ ಚುನಾವಣೆಯ ವೇಳೆ ಕೋಲ್ಕತಾದ ಸೀಲ್ದಾಹ್ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡು ಮೂವರು ಮತದಾರರು ಗಾಯಗೊಂಡಿದ್ದು, ಆ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಗಾಯಗೊಂಡವರಲ್ಲಿ ಒಬ್ಬರು ಕಾಲನ್ನು ಕಳೆದುಕೊಂಡಿದ್ದು, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತದಾನದ ವೇಳೆ ವಾರ್ಡ್ ಸಂಖ್ಯೆ 36 ರ ಟಾಕಿ ಶಾಲೆಯ ಮುಂಭಾಗದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದು, ಮೂವರು ವ್ಯಕ್ತಿಗಳು ಕ್ಷೇತ್ರದ ಮತದಾರರಾಗಿದ್ದಾರೆ.

ಮುನ್ಸಿಪಲ್ ಚುನಾವಣೆ ಎಲ್ಲಾ 144 ವಾರ್ಡ್‌ಗಳಲ್ಲಿ ಮತದಾನ ನಡೆಯುತ್ತಿದ್ದು, ಕೋಲ್ಕತಾ ಪೊಲೀಸರು ಸುಮಾರು 23,000 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next