Advertisement

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಸಾವು

09:13 AM Apr 19, 2020 | keerthan |

ಚಿಕ್ಕಮಗಳೂರು: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ತೋಟದ ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಘಟನೆ ಶನಿವಾರ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸದ ಬಾಳೆಹೊಳೆ ಸಮೀಪದ ಹಿತ್ಲುಮಕ್ಕಿಯಲ್ಲಿ ನಡೆದಿದೆ.

Advertisement

ತಮಿಳುನಾಡು ಮೂಲದ ಜ್ಯೋತಿ (28), ಮಾದಮ್ಮ (65), ಮಾರಿ (27) ತೋಟದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮಾದಮ್ಮ ಹಾಗೂ ಜ್ಯೋತಿ ತಾಯಿ ಮಗಳಾಗಿದ್ದು, ಮಾರಿ ಸಂಬಂಧಿ ಎಂದು ತಿಳಿದು ಬಂದಿದೆ.

ತಮಿಳುನಾಡು ರಾಜ್ಯದ ಸೇಲಂ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನವರಾಗಿದ್ದು ಕಳೆದ ಕೆಲ ತಿಂಗಳ ಹಿಂದೆ 14 ಕಾರ್ಮಿಕರ ಕುಟುಂಬ ಜಿಲ್ಲೆಯ ಕಾಫಿತೋಟದಲ್ಲಿ ಕಾಫಿ ಕಟಾವು ಕೆಲಸಕ್ಕೆಂದು ವಲಸೆ ಬಂದಿದ್ದರು.

ಕಳಸ ಪಟ್ಟಣದ ಬಾಳೆಹೊಳೆ ಸಮೀಪದ ಹಿತ್ಲುಮಕ್ಕಿ ಗಜೇಂದ್ರ ಅವರ ಕಾಫಿತೋಟದಲ್ಲಿ ಕೆಲ ತಿಂಗಳುಗಳಿಂದ ಕೆಲಸ ಮಾಡಿಕೊಂಡಿದ್ದ ಈ ಕಾರ್ಮಿಕರು ಲಾಕ್ ಡೌನ್‍ನಿಂದ ತಮ್ಮ ಊರಿಗೆ ಹೋಗಲು ಸಾಧ್ಯವಾಗಿರಲಿಲ್ಲ. ತೋಟದ ಕೂಲಿ ಲೈನ್ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಶನಿವಾರ ಸಂಜೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಸಿಡಿಲು ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಈ ವೇಳೆ ಹಿತ್ಲುಮಕ್ಕಿ ಗ್ರಾಮದ ಲೈನ್ ಮನೆಗಳ ಮುಂದೆ ನಿಂತಿದ್ದ ಮೂವರು ಮಹಿಳೆರಿಗೆ ಸಿಡಿಲು ಬಡಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರನ್ನು ಕಳಸ ಪಟ್ಟಣದ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಮೂವರೂ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next