Advertisement

ಕೈಗಾರಿಕಾ ಘಟಕದಲ್ಲಿ ಸಿಲಿಂಡರ್ ಸ್ಫೋಟ ; 3 ಸಾವು, 8 ಮಂದಿ ಗಂಭೀರ

06:10 PM Sep 28, 2022 | Team Udayavani |

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈ ಎಂಬಲ್ಲಿನ ಕೈಗಾರಿಕಾ ಘಟಕದಲ್ಲಿ ಹೈಡ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಇದನ್ನೂ ಓದಿ : ಭಾರತದಲ್ಲಿ ಮೂರು ಬಾರಿ ಆರ್ ಎಸ್ ಎಸ್ ಅನ್ನು ನಿಷೇಧಿಸಲಾಗಿತ್ತು… ಅಂದು ಏನಾಗಿತ್ತು?

ಚಂದರಪದ ಪ್ರದೇಶದ ವಿದ್ಯುತ್ ಉಪಕರಣ ತಯಾರಿಕಾ ಕಂಪನಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಮೂರು ಕಾರ್ಮಿಕರನ್ನು ಗುರುತಿಸಲಾಗದಷ್ಟು ಸುಟ್ಟು ಹಾಕಲಾಗಿದ್ದು, ಇತರ ಎಂಟು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ರಕ್ಷಣಾ ಕಾರ್ಯದ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next