Advertisement

ಮೂರು ವರ್ಷಗಳ ಹಿಂದಿನ ಪ್ರಕರಣ- ಪೊಲೀಸರ ವಿರುದ್ಧ ದೂರು ದಾಖಲಿಸಲು ಕೋರ್ಟ್‌ ನಿರ್ದೇಶನ

07:33 PM Jan 12, 2024 | Team Udayavani |

ಸಾಗರ: ಊಟಕ್ಕೆ ಹೋಗಿದ್ದಂತ ಸಂದರ್ಭದಲ್ಲಿ ತಾಲೂಕಿನ ವಕೀಲರೊಬ್ಬರ ಮೇಲೆ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ನ್ಯಾಯಾಲಯದ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಮೂರು ವರ್ಷದ ಬಳಿಕ ಅಂದಿನ ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಸೇರಿ ಮೂವರು ಪೊಲೀಸರ ವಿರುದ್ಧ ದೂರು ದಾಖಲಾಗಿದೆ.

Advertisement

ನಗರದ ವಕೀಲ ಎಸ್.ಬಿ. ರಾಜೇಶ್‌ಯವರು 2019 ರ ಫೆ. 28 ರಂದು ಖಾಸಗಿ ಹೋಟೆಲ್‌ಗೆ ಊಟಕ್ಕೆ ಹೋಗಿದ್ದ ಸಮಯದಲ್ಲಿ ಗ್ರಾಮಾಂತರ ಸಿಪಿಐ ಮಂಜುನಾಥ, ಗೃಹ ರಕ್ಷಕ ದಳದ ಸಿಬ್ಬಂದಿ ಕೃಷ್ಣಪ್ಪ ಹಾಗೂ ಪೇದೆ ಸೈನು ನದಾಫ್ ವಕೀಲ ರಾಜೇಶ್ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ.

ಈ ಸಂಬಂಧ ವಿನಾಕಾರಣ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ದಾಖಲಿಸಲು ಹೋದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ವಕೀಲ ರಾಜೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ಮೂರು ವರ್ಷದ ಬಳಿಕ ನ್ಯಾಯಾಲಯದ ಸೂಚನೆಯಂತೆ ಪೇಟೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ ೧೯೩, ೩೨೩, ೩೩೭, ೩೪೧, ೩೪೨, ೩೫೨, ೩೫೫, ೩೫೭, ೫೦೪, ೫೦೬ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಕೀಲ ರಾಜೇಶ್ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಅಂದಿನ ಗ್ರಾಮಾಂತರ ಠಾಣೆಯ ಸಿಪಿಐ ಮಂಜುನಾಥರನ್ನು ಮೊದಲ ಆರೋಪಿಯನ್ನಾಗಿಸಲಾಗಿದೆ. ಉಳಿದಂತೆ ಗೃಹ ರಕ್ಷಕ ದಳದ ಸಿಬ್ಬಂದಿ ಕೃಷ್ಣಪ್ಪ ಮತ್ತು ಪೇದೆ ಸೈನು ನದಾಫ್‌ರ ಹೆಸರುಗಳಿವೆ.

ಈ ಹಲ್ಲೆಗೆ ಕಾರಣರಾದ ಪೊಲೀಸರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬಾರ್ ಕೌನ್ಸಿಲ್ ನೇತೃತ್ವದಲ್ಲಿ ಜಿಲ್ಲಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಸಾಗರ ತಾಲೂಕು ವಕೀಲರ ಸಂಘವೂ ಹೋರಾಟ ನಡೆಸಿ, ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next