ಉಡುಪಿ: ತ್ರಿಶಾ ಕ್ಲಾಸಸ್ ನಲ್ಲಿ ತರಬೇತಿ ಪಡೆದು ನವೆಂಬರ್ 2022ರಲ್ಲಿ ನಡೆದ ರಾಷ್ಟ್ರಮಟ್ಟದ ಸಿ.ಎ. ಇಂಟರ್ ಮೀಡಿಯೆಟ್ ಹಾಗೂ ಸಿ.ಎ. ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಅಭಿನಂದಿಸಲಾಯಿತು.
ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಂಸ್ಥೆಗಳ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್, ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ನೀವು ಪಟ್ಟ ಪರಿಶ್ರಮಕ್ಕೆ ಇಂದು ಫಲ ದೊರಕಿದೆ. ನಿಮ್ಮ ಪ್ರಯತ್ನದ ಜೊತೆಗೆ ಕಲಿಸುವಲ್ಲಿ ಆಸಕ್ತಿ ಹೊಂದಿದ ಅಧ್ಯಾಪಕ ವೃಂದದ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ. ಇಲ್ಲಿಂದ ಹೊಸ ಪಯಣ ಆರಂಭವಾಗುತ್ತದೆ. ನಿಮ್ಮ ಪ್ರೋತ್ಸಾಹಕ್ಕೆ ತ್ರಿಶಾ ಎಂದಿಗೂ ಜೊತೆ ಇರುತ್ತದೆ ಎಂದು ತಿಳಿಸಿದರು.
ಇಂಟರ್ ಮೀಡಿಯೆಟ್ ನಲ್ಲಿ ಉತ್ತೀರ್ಣರಾದ 82 ವಿದ್ಯಾರ್ಥಿಗಳು, ಫೈನಲ್ ನಲ್ಲಿ ಉತ್ತೀರ್ಣರಾದ 6 ವಿದ್ಯಾರ್ಥಿಗಳು ಹಾಗೂ ಸಿ.ಎಸ್.ಇ.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 22 ವಿದ್ಯಾರ್ಥಿಗಳಿಗೆ ಹೆತ್ತವರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.
ಕಾರ‍್ಯಕ್ರಮದಲ್ಲಿ ಅತಿಥಿಯಾಗಿದ್ದ ಪ್ರೊ|ರಾಜ್ ಗಣೇಶ್ ಕಾಮತ್, ಟ್ರಸ್ಟಿಗಳಾದ ನಮಿತಾ ಜಿ. ಭಟ್, ರಾಮ್ ಪ್ರಭು, ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ|ಗುರುಪ್ರಸಾದ್ ರಾವ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ|ಇಂದುರೀತಿ, ತ್ರಿಶಾ ಕ್ಲಾಸಸ್ ಉಡುಪಿ ಕೇಂದ್ರದ ಮುಖ್ಯಸ್ಥ ಮಹೇಶ್ ಭಟ್, ಹಾಗೂ ಕಾಲೇಜಿನ ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ನಿಶಿತಾ ಶೆಟ್ಟಿ ನಿರೂಪಿಸಿ, ಪ್ರಥಮ್ ಕಾಮತ್ ವಂದಿಸಿದರು.