Advertisement

ನಾಲ್ವರ ಗಂಟಲು ದ್ರವ ಸಂಗ್ರಹ

06:33 AM Jun 05, 2020 | Suhan S |

ಕಾರಟಗಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಮ್ಮು, ಅಸ್ತಮಾ ಹಾಗೂ ಉಸಿರಾಟದ ತೊಂದರೆ ಇದ್ದ ನಾಲ್ವರು ಮಹಿಳೆಯರ ಗಂಟಲು ದ್ರವ ಸಂಗ್ರಹಿಸಿ ಕಿಮ್ಸ್‌ಗೆ ಕಳಿಸಲಾಗಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಡಾ| ನಾಗರಾಜ ತಿಳಿಸಿದ್ದಾರೆ.

Advertisement

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈವರೆಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾತ್ರ ನಡೆಸಲಾಗುತ್ತಿತ್ತು. ಜೂ.2ರಂದು ಗಂಟಲು ದ್ರವ ಸಂಗ್ರಹ ಕೇಂದ್ರ ಆರಂಭಿಸಲಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಗಂಟಲು ದ್ರವ ಸಂಗ್ರಹದ ಬಗ್ಗೆ ವಿಶೇಷ ತರಬೇತಿ ನೀಡಿ ಅಗತ್ಯವಾಗಿ ಕೈಗೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆಯೂ ತಿಳಿಸಲಾಗಿದೆ.

ಗುರುವಾರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳ ನಾಲ್ವರು ಮಹಿಳೆಯರ ಗಂಟಲುದ್ರವ ಸಂಗ್ರಹ ಮಾಡಲಾಗಿದೆ. ಅಲ್ಲದೆ ರಾಜಸ್ಥಾನದಿಂದ ಬುಧವಾರ ಪಟ್ಟಣಕ್ಕೆ ಆಗಮಿಸಿದ 12 ಜನರನ್ನು ಕೂಡ ಗುರುವಾರ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗಿದೆ. ಯಾರಲ್ಲೂ ಕೋವಿಡ್  ಸಂಬಂಧಿಸಿದ ಲಕ್ಷಣಗಳು ಕಂಡುಬಂದಿಲ್ಲ. ತಾಲೂಕಿನಲ್ಲಿ ಕೋವಿಡ್  ಶಂಕಿತ, ಸೋಂಕಿತರು ಇವರೆಗೆ ಎಲ್ಲೂ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next