Advertisement

ಗಂಟಲು ದ್ರವ ಸಂಗ್ರಹ ವಾಹನಕ್ಕೆ ಚಾಲನೆ

04:41 PM May 30, 2020 | Suhan S |

ಹಾವೇರಿ: ಜಿಲ್ಲಾಡಳಿತ, ಜಿಪಂ ಹಾಗೂ ಡಿಎಚ್‌ಒ ಇಲಾಖೆ, ಸಾರಿಗೆ ಇಲಾಖೆ ಸಹಯೋಗದೊಂದಿಗೆ ರೂಪಿಸಲಾದ ಕೋವಿಡ್‌-19 ಮೊಬೈಲ್‌ ಸ್ವಾಬ್‌ ಕಲೆಕನ್ಸ್‌ ವಾಹನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

Advertisement

ಗ್ರಾಮಗಳಿಗೆ ತೆರಳಿ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆಗಳು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳ ಗಂಟಲು ದ್ರವದ ಮಾದರಿಗಳನ್ನು ಸ್ಥಳೀಯವಾಗಿ ಸಂಗ್ರಹಿಸಲು ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಸಾರಿಗೆ ಸಂಸ್ಥೆ ಬಸ್‌ ಒಂದನ್ನು ಪ್ರಯೋಗಾಲಯವಾಗಿ ಬದಲಾಯಿಸಿ ಒಳಗೆ ಮಾದರಿ ಸಂಗ್ರಹದ ಉಪಕರಣಗಳನ್ನು ಅಳವಡಿಸಿ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ.

ಸಂಸದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಅರುಣಕುಮಾರ ಗುತ್ತೂರ, ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್‌. ಪಾಟೀಲ, ಜಿಪಂ ಸದಸ್ಯ ಸಿದ್ಧರಾಜ ಕಲಕೋಟಿ, ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ, ಎಸ್ಪಿ ಕೆ.ಜಿ. ದೇವರಾಜು ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next