ನವದೆಹಲಿ: ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಹೊರಹಾಕಿದ್ದಕ್ಕೆ ಆಕ್ರೋಶಗೊಂಡಿರುವ ಕುಸ್ತಿಪಟುಗಳು ತಾವು ದೇಶಕ್ಕೋಸ್ಕರ ಕಷ್ಟಪಟ್ಟು ಸಂಪಾದಿಸಿರುವ ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಡಬ್ಲುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ಧ ಭಾರತೀಯ ಕುಸ್ತಿಪಟುಗಳನ್ನು ಜಂತರ್ ಮಂತರ್‌ನಿಂದ ಪೋಲಿಸರು ಹೊರಹಾಕಿದ್ರು. ಆದರೂ ಛಲ ಬಿಡದ ಅವರು ಇಂಡಿಯಾ ಗೇಟ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಪ್ರಾಣ ಇರುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ 2016 ರ ಒಲಂಪಿಕ್ ಕಂಚು ವಿಜೇತೆ ಸಾಕ್ಷಿ ಮಲಿಕ್, ʻಕುಸ್ತಿ ಪಟುಗಳು ಇಂದು ಸಂಜೆ 6 ಗಂಟೆಗೆ ಹರಿದ್ವಾರಕ್ಕೆ ತೆರಳಿ ತಮ್ಮ ಪದಕಗಳನ್ನು ಗಂಗಾ ನದಿಗೆ ಹಾಕಲಿದ್ದಾರೆʼ ಎಂದಿದ್ದಾರೆ.
ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾನೂನು, ಸುವ್ಯವಸ್ಥೆ ಉಲ್ಲಂಘಿಸಿದ ಆರೋಪದಲ್ಲಿ ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಮತ್ತು ಭಜರಂಗ್ ಪೂನಿಯಾ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.
ಇದು ದೇಶಾದ್ಯಂತ ಭಾರಿ ಟೀಕೆಗೆ ಗುರಿಯಾಗಿತ್ತು. ಜಾವಲಿನ್ ಚಾಂಪಿಯನ್ ನೀರಜ್ ಛೋಪ್ರಾ, ಶೂಟರ್ ಅಭಿನವ್ ಭಿಂದ್ರಾ ಸೇರಿ ಅನೇಕರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದರು.
ಇದನ್ನೂ ಓದಿ: Excise policy; ದೆಹಲಿ ಮಾಜಿ ಡಿಸಿಎಂ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್