Advertisement

ಡಬ್ಬಿಂಗ್‌ ವಿರುದ್ಧ ಮತ್ತೆ ಚಿತ್ರ ರಂಗದ ಗುಡುಗು

11:19 AM Mar 10, 2017 | Harsha Rao |

ಬೆಂಗಳೂರು: ಪರಭಾಷಾ ಚಿತ್ರಗಳು ಕನ್ನಡಕ್ಕೆ ಡಬ್ಬಿಂಗ್‌ ಆಗುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು
ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿದ್ದು, ಆ ಮೂಲಕ ಮುಂದಿನ ದಿನಗಳಲ್ಲಿ ಡಬ್ಬಿಂಗ್‌ ವಿರೋಧಿ ಹೋರಾಟ ಮತ್ತಷ್ಟು ತೀವ್ರವಾಗಲಿದೆ ಎಂಬ ಎಚ್ಚರಿಕೆ ನೀಡಿವೆ.

Advertisement

ಕನ್ನಡ ಚಳವಳಿ ಮುಖಂಡ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಯ ಸಾವಿರಾರು ಕಾರ್ಯಕತರು, ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಕಲಾವಿದರು ಭಾಗವಹಿಸಿ ಡಬ್ಬಿಂಗ್‌ ವಿರುದ್ಧದ
ಹೋರಾಟಕ್ಕೆ ಬೆಂಬಲ ಸೂಚಿಸಿದರು. ಮೈಸೂರು ಬ್ಯಾಂಕ್‌ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೆ ಸಾಗಿದ ಮೆರವಣಿಗೆಯಲ್ಲಿ ಡಬ್ಬಿಂಗ್‌ ವಿರೋಧಿ ಘೋಷಣೆಗಳು ಮೊಳಗಿದವು.

ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಡಬ್ಬಿಂಗ್‌ ವಿರೋಧಿ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಕನ್ನಡ ಚಳವಳಿ ಹೋರಾಟಗಾರ ವಾಟಾಳ್‌ ನಾಗರಾಜ್‌, “ಕರ್ನಾಟಕದಲ್ಲಿ ಡಬ್ಬಿಂಗ್‌ ಚಿತ್ರಗಳಿಗೆ ಯಾವುದೇ ಕಾರಣಕ್ಕೂ ಅವಕಾಶ
ಕೊಡುವುದಿಲ್ಲ. ಡಬ್ಬಿಂಗ್‌ ವಿರುದ್ಧದ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ’ ಎಂದರು.

ಮುಂಚೂಣಿ ನಟರು ಗೈರು:
ದರ್ಶನ್‌, ಪ್ರಜ್ವಲ್‌, ಸೃಜನ್‌ ಲೋಕೇಶ್‌ ಹೊರತು ಪಡಿಸಿ ಹಲವು ನಟರು ಗೈರು ಹಾಜರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next