ಮೂಡಲಗಿ : ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮೂಡಲಗಿ ತಾಲೂಕಿನ ವೆಂಕಟ್ಯಾಪೂರ ಗ್ರಾಮದ ಮಲ್ಲಮ್ಮ ಕಲ್ಮೇಶ ವಟವಟಿ (35) ಮೃತಪಟ್ಟ ಮಹಿಳೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ಸೋಮವಾರ ಸಂಜೆ ಗುಡುಗು, ಸಮೇತ ಮಳೆಯಾಗಿದೆ ಈ ವೇಳೆ ಮಲ್ಲಮ್ಮ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯ ಕೆಲಸ ಮುಗಿಸಿಕೊಂಡು ಮೇವಿನ ಹೊರೆ ಹೊತ್ತುಕೊಂಡು ಜಮೀನದಲ್ಲಿ ಸಾಗುತ್ತಿದಾಗ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಕುಲಗೋಡ ಪೊಲೀಸ್ ಸಿಬ್ಬಂದಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿ ಭೆಟ್ಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೂ ಬೀಳುತ್ತೆ ದಂಡ: ಸರಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ