Advertisement

ಜಿಲ್ಲೆಯ ವಿವಿಧೆಡೆ ಗುಡುಗು-ಸಿಡಿಲು ಸಹಿತ ಚದುರಿದ ಮಳೆ

09:42 AM Jun 24, 2019 | Team Udayavani |

ಲಕ್ಷ್ಮೇಶ್ವರ: ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಕಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಹಳ್ಳಗಳು ತುಂಬಿ ಹರಿದಿವೆ. ಕೆರೆಕಟ್ಟೆಗಳು, ಕೃಷಿ ಹೊಂಡ, ಬದುವು-ಬಾಂದಾರ, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ.

Advertisement

ರವಿವಾರ ಮಧ್ಯಾಹ್ನ ತಾಲೂಕಿನ ಯಳವತ್ತಿ, ಯತ್ನಳ್ಳಿ, ಮಾಗಡಿ, ಗೊಜನೂರ, ಅಕ್ಕಿಗುಂದ, ಆದ್ರಳ್ಳಿ, ಬಡ್ನಿ, ಬಟ್ಟೂರ, ಸೂರಣಗಿ, ಹುಲ್ಲೂರ, ಬಾಲೆಹೊಸೂರ, ಶಿಗ್ಲಿ, ದೊಡ್ಡೂರ, ರಾಮಗೇರಿ, ಬಸಾಪುರ, ಅಡರಕಟ್ಟಿ ಸೇರಿ ಎಲ್ಲೆಡೆ ಉತ್ತಮ ಮಳೆಯಾಗಿದೆ. ಹಲವು ಗ್ರಾಮಗಳಲ್ಲಿ ವರ್ಷಗಳಿಂದ ಚರಂಡಿ ಸ್ವಚ್ಛಗೊಳಿಸದಿದ್ದರಿಂದ ನೀರು ರಸ್ತೆ ಮೇಲೆ ಹರಿದು ಮನೆಯೊಳಗೂ ನುಗ್ಗಿದವು. ಲಕ್ಷ್ಮೇಶ್ವರದಲ್ಲಿ ಒಳಚರಂಡಿ ಕಾಮಗಾರಿ, ನಗರೋತ್ಥಾನ ಕಾಮಗಾರಿ, ಜಿಯೋ ಕಂಪನಿಯವರು ಎಲ್ಲೆಂದರಲ್ಲಿ ರಸ್ತೆ ಮಧ್ಯ ತಗ್ಗು ತೋಡಿದ್ದರಿಂದ ನೀರು ನಿಂತು ಜನರ ಸಂಚಾರಕ್ಕೆ ತೊಂದರೆಯಾಯಿತು.

ಸಂಚಾರ ಸ್ಥಗಿತ: ಗದಗ-ಲಕ್ಷ್ಮೇಶ್ವರ ಮಾರ್ಗದ ಪಾಳಾ-ಬಾದಾಮಿ ರಾಜ್ಯ ಹೆದ್ದಾರಿಯಲ್ಲಿ ತಾಲೂಕಿನ ಗೊಜನೂರ ಗ್ರಾಮದ ಹತ್ತಿರದ ಹಳ್ಳ ತುಂಬಿ ರಸ್ತೆ ಮೇಲೆ ಹರಿದಿದ್ದರಿಂದ ಎರಡು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು. ಗದಗದಿಂದ ಹಾವೇರಿ, ದಾವಣಗೆರೆ, ಬೆಂಗಳೂರ ಕಡೆಗೆ ಮತ್ತು ಬೆಂಗಳೂರ ಕಡೆಯಿಂದ ಗದಗ ಕಡೆಗೆ ಹೋಗುವ ಎಲ್ಲ ವಾಹನಗಳಿಗೆ ಇದು ಪ್ರಮುಖ ರಸ್ತೆಯಾಗಿದೆ. ಹೀಗಾಗಿ ಎರಡೂ ಕಡೆ ಕಿಮೀನಷ್ಟು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಕೃಷಿ ಚಟುವಟಿಕೆಗಳಿಗೆ ಹೋಗಿದ್ದ ರೈತರು, ದನಕರುಗಳು, ಬೈಕ್‌ ಸವಾರರು, ಪ್ರಯಾಣಿಕರು ಪರದಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next