Advertisement

13 ರಾಜ್ಯಗಳಲ್ಲಿ ಇಂದು ಮಳೆ

09:00 AM May 07, 2018 | Team Udayavani |

ಹೊಸದಿಲ್ಲಿ : ದೇಶದ 13 ರಾಜ್ಯಗಳು ಹಾಗೂ 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೋಮವಾರ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಗೃಹ ಸಚಿವಾಲಯ ಮುನ್ನೆಚ್ಚರಿಕೆ ನೀಡಿದೆ. ಆದರೆ ಕರ್ನಾಟಕದಲ್ಲಿ ಮಳೆಯಾಗುವ ಬಗ್ಗೆ ಗೃಹ ಸಚಿವಾಲಯ ಯಾವುದೇ ಸೂಚನೆ ನೀಡಿಲ್ಲ.

Advertisement

ಜಮ್ಮು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಇನ್ನು ಹಿಮಾಚಲ ಪ್ರದೇಶ, ಉತ್ತರಾಖಂಡ ಹಾಗೂ ಪಂಜಾಬ್‌ ನಲ್ಲಿ ಗುಡುಗು ಸಹಿತ ಮಳೆ ಉಂಟಾಗಬಹುದು. ಪಶ್ಚಿಮ ರಾಜಸ್ಥಾನದಲ್ಲಿ ಧೂಳಿನ ಮಾರುತ ಹಾಗೂ ಗುಡುಗು ಸಹಿತ ಮಳೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯನ್ನು ಆಧರಿಸಿ ಗೃಹ ಸಚಿವಾಲಯ ಸೂಚನೆ ನೀಡಿದೆ. ಕಳೆದ ವಾರವಷ್ಟೇ ದೇಶದ ಹಲವೆಡೆ ಉಂಟಾದ ಭಾರಿ ಮಳೆಗೆ 124 ಜನರು ಸಾವನ್ನಪ್ಪಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next