Advertisement

ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

09:27 PM Mar 15, 2023 | Team Udayavani |

ಬೆಂಗಳೂರು: ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?: ಬುಧವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ.

Advertisement

ಚಿಕ್ಕಮಗಳೂರಿನ ಜಯಪುರದಲ್ಲಿ 3, ಬಾಳೆಹೊನ್ನೂರು 2, ಉತ್ತರಕನ್ನಡದ ಜನಮನೆ, ಕೊಡಗಿನ ಸುಂಟಿಕೊಪ್ಪ, ಶಿವಮೊಗ್ಗದ ಹುಂಚದ ಕಟ್ಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕಲಬುರಗಿಯಲ್ಲಿ 37.5 ಡಿಗ್ರಿ ಉಷ್ಣಾಂಶ: ಕಲಬುರಗಿಯಲ್ಲಿ 37.5 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳೂರು 35.9, ರಾಯಚೂರು 36.4, ಮಂಗಳೂರು 35.9, ಬಳ್ಳಾರಿ 36.3, ವಿಜಯಪುರ 35.1, ಗದಗ 35.5, ಬೆಂಗಳೂರು 33, ಧಾರವಾಡ 34, ದಾವಣಗೆರೆ 34.5, ಚಾಮರಾಜನಗರ 35.3, ಕೊಪ್ಪಳ 35.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next