ಚನ್ನಗಿರಿ: ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಬೆಂಕಿಯಿಂದ ಸುಟ್ಟು ಭಸ್ಮವಾದ ಘಟನೆ ನಡೆಯಿತು.
ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ತಾಲ್ಲೂಕಿನಲ್ಲಿ ಬಿರುಗಾಳಿ, ಮಿಂಚು, ಗುಡುಗು ಸಮೇತ ಭಾರಿ ಮಳೆ ಸುರಿಯಲಾರಂಭಿಸಿತ್ತು ಈ ವೇಳೆ ತಿಪ್ಪಗೊಂಡನಹಳ್ಳಿ ಗ್ರಾಮದ ಮನೆಯೊಂದರ ಸಮೀಪದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಅಪ್ಪಳಿಸಿದ ತಕ್ಷಣ ಆ ಮರಕ್ಕೆ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿದೆ.
ಮನೆಯಲ್ಲಿದ್ದವರು ಘಟನೆ ನೋಡಿ ಭಯಭೀತರಾಗಿದ್ದಾರೆ. ಸಿಡಿಲಿನ ಹೊಡೆತಕ್ಕೆ ತೆಂಗಿನ ಮರದ ಸುತ್ತಮುತ್ತಲಿನ ಸುಮಾರು 10ಕ್ಕೂ ಹೆಚ್ಚು ಅಡಿಕೆ ಮರಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಹುಣಸೂರಿನಲ್ಲಿ ಸಿಡಿಲಿನ ಆಘಾತ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಮೃತ್ಯು