Advertisement

ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:45 AM Oct 14, 2021 | Team Udayavani |

ಮೇಷ: ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ, ಧಾರ್ಮಿಕ ನಾಯಕರಿಗೆ ಶುಭಫ‌ಲ. ದೀರ್ಘ‌ ಪ್ರಯಾಣ ದಿಂದ ಲಾಭ. ನೂತನ ಬಂಧುಮಿತ್ರರ ಭೇಟಿ. ಸುಖಸಂತೋಷ ದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.

Advertisement

ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿಯಿಂದ ವೃದ್ಧಿ. ರಾಜಕೀಯ ನಾಯಕರಿಗೆ ಆಹಾರೋದ್ಯಮ, ವಸ್ತ್ರ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಸಮಾಧಾನ ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದ ಸುಖ. ಪಾನೀಯ ಆಹಾರೋದ್ಯಮ ಸಂಸ್ಥೆಗಳಿಗೆ ಅನುಕೂಲ. ಸಾಂಸಾರಿಕ ನೆಮ್ಮದಿಗೆ ತಾಳ್ಮೆ ಅಗತ್ಯ.

ಕರ್ಕ: ಆರೋಗ್ಯ ಗಮನಿಸಿ. ಧಾರ್ಮಿಕ ಕೆಲಸ ಕಾರ ಗಳಲ್ಲಿ ಆಸಕ್ತಿ. ಉತ್ತಮ ವಾಕ್‌ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ಗುರುಹಿರಿಯರ ಆರೋಗ್ಯ ಜಾಗ್ರತೆ ವಹಿಸಿ.

ಸಿಂಹ: ಕಾರ್ಯ ನಿಮಿತ್ತ ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮವಾದರೂ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ, ಧಾರ್ಮಿಕ ಕಾರ್ಯಗಳಿಗೆ ದಾನ ಧರ್ಮಾದಿಗಳಿಗೆ ಧನವ್ಯಯಿಸಿದ ತೃಪ್ತಿ.

Advertisement

ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ ಸಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನ ವಸ್ತುಗಳಲ್ಲಿಯೂ, ದೂರ ಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ.

ತುಲಾ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿ ದಂತೆ ಕಾರ್ಯ ಸಫ‌ಲತೆಯಿಂದ ಮನಃಸಂತೋಷ.

ವೃಶ್ಚಿಕ: ಧೈರ್ಯ ಕಾರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ, ಗುರುಹಿರಿಯರ ಸಹಕಾರ.

ಧನು: ಸಂಸಾರದೊಂದಿಗೆ ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ, ಯಶಸ್ಸು, ಸುಖಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ.

ಮಕರ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶ.

ಕುಂಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಧೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ.

ಮೀನ: ಆರೋಗ್ಯ ಗಮನಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next